ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಬದುಕು ನಾಶ: ಶಾಂತವೀರಶ್ರೀ

Lingaraj Badiger
Updated On : 26 Jul 2013, 11:55 am

ಯಾದಗಿರಿ: ಇಂದಿನ ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ ಬದುಕು ನಾಶಮಾಡಿಕೊಳ್ಳುತ್ತಿದ್ದಾರೆ ಎಂದು ಗುರುಮಠಕಲ್ ಖಾಸಾಮಠದ ಶಾಂತವೀರ ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ಮೋಟ್ನಳ್ಳಿ ಮೊರಾರ್ಜಿ ದೇಸಾಯಿ ಸರ್ಕಾರಿ ಮಾದರಿ ವಸತಿ ಶಾಲೆಯಲ್ಲಿ ಸೃಷ್ಠಿ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಮುಕ್ತ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆ ಆಶ್ರಯದಲ್ಲಿ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ದೇಶಿ ಸಂಸ್ಕೃತಿ ಬೆಳೆಸಿ: ವಿದ್ಯಾರ್ಥಿಗಳು ಪಾಶ್ಚಿಮಾತ್ಯ ಸಂಸ್ಕೃತಿ ಅಳವಡಿಸಿಕೊಳ್ಳುವ ಮೂಲಕ ಭಾರತೀಯ ಸಂಸ್ಕೃತಿಗೆ ಹಿನ್ನಡೆಯಾಗುತ್ತಿದೆ. ಮಾನವೀಯ ಸಂಬಂಧಗಳು ಕಳಚುತ್ತಿವೆ. ಆದ್ದರಿಂದ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಬೆಳೆಸುವುದು ಅವಶ್ಯ ಎಂದರು.
ಲೇಖಕಿ ಮಂಗಲಾ ಭಾಗವತ್ ಅವರು ಮಕ್ಕಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಮಹತ್ವದ ಕುರಿತು ಉಪನ್ಯಾಸ ನೀಡುತ್ತಾ, ದೇಶದ ಸಂಸ್ಕೃತಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ಪ್ರತಿಯೊಬ್ಬ ಪೋಷಕರು, ಶಿಕ್ಷಕರ ಜವಾಬ್ದಾರಿಯಾಗಿದೆ. ವಿದೇಶೀಯರು ಆರ್ಥಿಕವಾಗಿ ಮುಂದುವರೆದರೂ ಮಾನಸಿಕ ನೆಮ್ಮದಿ ಕಳೆದುಕೊಂಡಿದ್ದಾರೆ. ಆ ಕಾರಣಕ್ಕಾಗಿ ವಿದೇಶಿಯರು ಮಾನಸಿಕ ನೆಮ್ಮದಿಗಾಗಿ ಭಾರತಕ್ಕೆ ಆಗಮಿಸುತ್ತಾರೆ ಎಂದು ಹೇಳಿದರು.
ಸಾಂಸ್ಕೃತಿಕ ಚಟುವಟಿಕೆ ಅವಶ್ಯ: ಮಾನವನ ತಲೆಯಲ್ಲಿ ಕಾರ್ಯನಿರ್ವಹಿಸುವ ಎರಡು ರೀತಿಯ ಮೆದುಳಿದೆ. ಬಲಭಾಗದ ಮೆದುಳು ವ್ಯವಹಾರಿಕವಾಗಿ ಆಲೋಚಿಸಿದರೆ, ಎಡಭಾಗದ ಮೆದುಳು ಭಾವನಾತ್ಮಕವಾಗಿ ಆಲೋಚಿಸುತ್ತದೆ. ಭಾವನಾತ್ಮಕವಾಗಿ ಆಲೋಚಿಸುವ ಕ್ರಿಯೆಗೆ ಹೆಚ್ಚು ತೊಡಗಿಸುವಂತೆ ಮಾಡುವುದೇ ಸಾಂಸ್ಕೃತಿಕ ಚಟುವಟಿಕೆಗಳಾಗಿವೆ ಎಂದರು. ಕವನಗಳು ಹಾಗೂ ಕಥೆಗಳ ಮೂಲಕ ಮಕ್ಕಳಿಗೆ ಸಾಂಸ್ಕೃತಿಕ ಚಟುವಟಿಕೆಗಳ ಮಹತ್ವ ತಿಳಿಸಿಕೊಟ್ಟರು.
ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಬಿಇಒ ಮಜರ್ ಹುಸೇನ್, ತಾಲೂಕ ಕಸಾಪ ಅಧ್ಯಕ್ಷ ಶ್ರೀನಿವಾಸ ಕರ್ಲಿ ವೇದಿಕೆ ಮೇಲಿದ್ದರು. ಶಾಲೆಯ ಪ್ರಾಂಶುಪಾಲ ಡಾ. ಗಾಳೆಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement