ಉಸ್ತುವಾರಿ ಕಾರ್ಯದರ್ಶಿ ಪ್ರವಾಸ
ಯಾದಗಿರಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ನಗರಾಭಿವೃದ್ಧಿ ಇಲಾಖೆಯ ಆಯುಕ್ತರಾದ ವಿ.ಮಂಜುಳಾ ಜು.27ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಬರ, ನೆರೆ ಕಾಮಗಾರಿ, ಕುಡಿವ ನೀರಿನ ಸರಬರಾಜು, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಕಾರ್ಯಕ್ರಮ, ಪಶುಸಂಗೋಪನ ಇಲಾಖೆ ಕಾಮಗಾರಿ ಪರಿಶೀಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.