ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಕಾಲಮಿತಿಯೊಲ್ಲೇ ಉತ್ತಮ ಕಾಮಗಾರಿ ಪೂರ್ಣಗೊಳಿಸಿ'

Mainashree
Updated On : 28 Jul 2013, 10:56 am

ಯಾದಗಿರಿ: ನಗರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಜಿಲ್ಲಾ ಸಂಕೀರ್ಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಪಶು ಸಂಗೋಪನಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ಮಂಜುಳಾ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  ನಗರದ ಹೊರವಲಯದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಸುಮಾರು 60 ಎಕರೆ ನಿವೇಶನದಲ್ಲಿ 45 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಜಿಲ್ಲಾ ಸಂಕೀರ್ಣ ಕಾಮಗಾರಿಯ ಪ್ರಗತಿಯನ್ನು ಅವರು ವೀಕ್ಷಿಸಿದರು. ಕಾಮಗಾರಿಯ ಗುಣಮಟ್ಟ ಕಾಪಾಡುವುದರ ಜತೆಗೆ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.  ಹೊಸ ಜಿಲ್ಲೆಯಾಗಿದ್ದರಿಂದ ಹಲವಾರು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡದಲ್ಲಿ ಕಾರ್ಯ ಮಾಡುತ್ತಿವೆ. ಅದಕ್ಕಾಗಿ ಕಂದಾಯ ಇಲಾಖೆ ವ್ಯಾಪ್ತಿಯ ಕಚೇರಿಗಳನ್ನು ಒಂದೇ ಕಟ್ಟಡಕ್ಕೆ ತರಲು ಈ ಕಟ್ಟಡ ನಿರ್ಮಾಣವಾಗುತ್ತಿದೆ. ಇದಕ್ಕೆ ಈಗಾಗಲೇ ಸರ್ಕಾರ 45 ಕೋಟಿ ಅನುದಾನ ಒದಗಿಸಿದೆ. ಅವಶ್ಯಕತೆ ಬಿದ್ದಲ್ಲಿ ಹೆಚ್ಚಿನ ಅನುದಾನ ಒದಗಿಸಲು ಸರ್ಕಾರ ಸಿದ್ದವಿದೆ ಎಂದು ತಿಳಿಸಿದರು.
  ತಾವು ಆಗಾಗ ಭೇಟಿ ಮಾಡಿ ಕಟ್ಟಡದ ಗುಣಮಟ್ಟವನ್ನು ನೋಡಬೇಕು ಎಂದು ಜತೆಗಿದ್ದ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರರಿಗೆ ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಕೆಎಚ್‌ಬಿ ಅಧಿಕಾರಿಗಳು ಜತೆಗಿದ್ದು ಕಟ್ಟಡದ ಮಾಹಿತಿಯನ್ನು ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement