ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಡೀಸೆಲ್ ಕಲಬೆರಕೆ ತಡೆಗೆ ಒತ್ತಾಯ

Mainashree
Updated On : 28 Jul 2013, 10:57 am

ಯಾದಗಿರಿ: ನಗರದಲ್ಲಿ ಡೀಸೆಲ್‌ನಲ್ಲಿ ಸೀಮೆಎಣ್ಣೆ ಸೇರಿಸಿ ಮಾರಾಟ ಮಾಡುತ್ತಿದ್ದು, ಇದರಿಂದಾಗಿ ವಾಹನ ಚಾಲಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅದಕ್ಕಾಗಿ ಇದರ ಬಗ್ಗೆ ಸೂಕ್ತ ಕ್ರಮ ಜರಗಿಸಬೇಕೆಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೊಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರಾಯ ಕಂದಕೂರ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಿಗೆ ಮತ್ತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
  ನಗರದ ಕೆಲ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್‌ನಲ್ಲಿ ಸೀಮೆಎಣ್ಣೆ ಮತ್ತು ನೀರು ಬೆರಕೆ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳ ಕ್ಷಮತೆ ಕಡಿಮೆಯಾಗುತ್ತಿದೆ. ಅಲ್ಲದೇ ವಾಹನಗಳು ದುರಸ್ತಿಗೆ ಬರುತ್ತಿವೆ. ಆದ್ದರಿಂದ ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಜರಗಿಸಬೇಕೆಂದು ಒತ್ತಾಯಿಸಿದ್ದಾರೆ.
 ಮನವಿ ಸ್ವೀಕರಿಸಿದ ಉಪ ನಿರ್ದೇಶಕರು ತನಿಖೆ ನಡೆಸಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement