ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಇಂದು ರಾಷ್ಟ್ರೀಯ ಹೆದ್ದಾರಿ 150ಕ್ಕೆ ಫರ್ನಾಂಡಿಸ್ ಅಡಿಗಲ್ಲು

Rashmi Kasaragodu
Updated On : 30 Jul 2013, 11:27 am

ಗುಲ್ಬರ್ಗ: ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯ ಹಾಗೂ ರಾಜ್ಯ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ರಾಷ್ಟ್ರೀಯ ಹೆದ್ದಾರಿಗಳು ಇವರ ವತಿಯಿಂದ ನೂತನವಾಗಿ ಘೋಷಿಸಲಾದ ರಾಷ್ಟ್ರೀಯ ಹೆದ್ದಾರಿ 150ರ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ಜು.30 ರಂದು ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ.
ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರು ಶಿಲಾನ್ಯಾಸ ನೆರವೇರಿಸುವರು. ಡಾ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿರುವರು.
ಗೌರವಾನ್ವಿತ ಅತಿಥಿಗಳಾಗಿ ಡಾ. ಎನ್. ಧರ್ಮಸಿಂಗ್, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ, ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ವಕ್ಫ್ ಸಚಿವ ಖಮರುಲ್ ಇಸ್ಲಾಂ, ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಬೂರಾವ ಚಿಂಚನಸೂರ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗವಹಿಸುವರು.
ಅಫಜಲ್ಪುರದಲ್ಲಿ ಮಧ್ಯಾಹ್ನ 3ಕ್ಕೆ: ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಜುಲೈ 30 ರಂದು ಅಫಜಲ್ಪುರ ನ್ಯಾಷನಲ್ ಫಂಕ್ಷನ್ ಹಾಲ್ನಲ್ಲಿ ಮಧ್ಯಾಹ್ನ 3ಕ್ಕೆ ಅಂತರರಾಜ್ಯ ಸಂಪರ್ಕ ಯೋಜನೆ ಅಡಿಯಲ್ಲಿ ಗುಲ್ಬರ್ಗದಿಂದ ಚೌಡಾಪುರ, ಗಾಣಗಾಪುರ, ಅಫಜಲ್ಪುರ ಮಾರ್ಗವಾಗಿ ಮಹಾರಾಷ್ಟ್ರ ಗಡಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸ ನೆರವೇರಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement