ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಜಲಾಶಯ ನಿರ್ಮಾಣಕ್ಕೆ ಆಗ್ರಹ

Rashmi Kasaragodu
Updated On : 31 Jul 2013, 11:25 am

ಕ.ಪ್ರ. ವಾರ್ತೆ  ಯಾದಗಿರಿ  ಜು.30
ಜಿಲ್ಲೆಗೆ ಹೊಂದಿಕೊಂಡಿರುವ ದೇವದುರ್ಗ ತಾಲೂಕಿನ ತಿಂಥಣಿ ಕ್ರಾಸ್ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಾಣ ಮಾಡುವ ಯೋಜನೆಗೆ ಬಿಜೆಪಿ ಸರ್ಕಾರ ಕ್ರಿಯಾಯೋಜನೆ ತಯಾರಿಸಿತ್ತು. ಪ್ರಸಕ್ತ ಸರ್ಕಾರ ಈ ಯೋಜನೆ ಜಾರಿಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಶಿವನಗೌಡ ನಾಯಕ ಒತ್ತಾಯಿಸಿದರು.
  ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಕೃಷ್ಣಾ ನದಿಗೆ ರು. 1200 ಕೋಟಿ ವೆಚ್ಚದಲ್ಲಿ ತಿಂಥಣಿ ಬಳಿ ಅಣೆಕಟ್ಟೆ ನಿರ್ಮಾಣ ಮಾಡಲು ನೀಲನಕ್ಷೆ ಸಿದ್ಧಪಡಿಸಿತ್ತು. ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಕೂಡ ಈ ಯೋಜನೆಗೆ ಆಸಕ್ತಿ ವಹಿಸಿದರು. ಚುನಾವಣೆ ಘೋಷಣೆಯಾದ್ದರಿಂದ ಯೋಜನೆ ಜಾರಿಗೆ ಹಿನ್ನಡೆಯಾಯಿತು ಎಂದು ಹೇಳಿದರು.
ನೀರಾವರಿ ಕ್ಷೇತ್ರ: ಇದರಿಂದ ಜಲಾಶಯದಲ್ಲಿ 42 ಟಿಎಂಸಿ ನೀರು ಸಂಗ್ರಹವಾಗಿ ದೇವದುರ್ಗ, ಯಾದಗಿರಿ, ಶಹಾಪುರ, ಸುರಪುರ ತಾಲೂಕಿನ ರೈತರ ಬಹುತೇಕ ಜಮೀನು ನೀರಾವರಿ ಕ್ಷೇತ್ರಕ್ಕೆ ಒಳಪಡುತ್ತವೆ. ಈ ಭಾಗದ ಸಚಿವರು ಹಾಗೂ ಶಾಸಕರು ಮತ್ತು ವಿರೋಧ ಪಕ್ಷದ ನಾಯಕರು ಪಕ್ಷಾತೀತವಾಗಿ ನಿಯೋಗ ತೆಗೆದುಕೊಂಡು ಹೋಗಿ, ಈ ಯೋಜನೆ ಅನುಷ್ಠಾನಗೊಳ್ಳಲು ನಿರಾವರಿ ಸಚಿವರು, ಮುಖ್ಯಮಂತ್ರಿಗಳ ಬಳಿಗೆ ತೆರಳಿ ಯೋಜನೆಯ ಸಾಧಕ ಬಾಧಕಗಳನ್ನು ವಿವರಿಸಿ ಜಾರಿಗೆ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.
ಬಿಎಸ್ವೈ ಸೇರ್ಪಡೆ ಅನಿವಾರ್ಯ: ಬಿಜೆಪಿಗೆ ಮಾಜಿ ಸಿಎಂ ಯಡಿಯೂರಪ್ಪ ಮರಳಿದರೆ ಮಾತ್ರ ಪಕ್ಷಕ್ಕೆ ಬರುವ ದಿನಗಳಲ್ಲಿ ಭವಿಷ್ಯವಿದೆ. ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲಾ ಶಾಸಕರು ಬಿಎಸ್ವೈ ಅವರನ್ನು ಗೌರವಯುತವಾಗಿ ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಆಗ ಮಾತ್ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಿಸಲು ಸಾಧ್ಯ ಎಂದು ಉನ್ನತ ನಾಯಕರಿಗೆ ಒತ್ತಾಯ ಮಾಡಿದ್ದಾರೆ. ಅವರು ಪಕ್ಷಕ್ಕೆ ಸೇರ್ಪಡೆಗೊಂಡ ನಂತರವೇ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಚಿಂತನೆ ನಡೆಸುತ್ತೇನೆಂದು ತಿಳಿಸಿದರು.
  ದೇಶದ ಜನತೆ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚುತ್ತಿದ್ದಾರೆ. ಅದರಂತೆ ರಾಜ್ಯದಲ್ಲಿ ಬಿಎಸ್ವೈ ನಾಯಕತ್ವ ಅವಶ್ಯಕವಾಗಿದೆ ಎಂದು ಹೇಳಿದರು. ಬಿಜೆಪಿ ಮುಖಂಡ ಚಂದ್ರಶೇಖರಗೌಡ ಮಾಗನೂರ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement