'ಇನ್ಸ್ಪೈರ್' ಭಾಗ್ಯಶ್ರೀ ಪ್ರಥಮ
ಗುಲ್ಬರ್ಗ: 2012- 13ನೇ ಸಾಲಿನ ಜಿಲ್ಲಾ ಮಟ್ಟದ ಇನ್ಸ್ಪೈರ್ ಅವಾರ್ಡ್ ವಸ್ತು ಪ್ರದರ್ಶನದಲ್ಲಿ ತಾಲೂಕಿನ ಭೂಸಣಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಭಾಗ್ಯಶ್ರೀ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಹಾಗೂ ಮಾರ್ಗದರ್ಶಿ ಶಿಕ್ಷಕ ಮಲ್ಲಿಕಾರ್ಜುನ ಅವರಿಗೆ ಮುಖ್ಯಗುರು ನಾಗಪ್ಪ ಹಾಗೂ ಸಿಬ್ಬಂದಿ ವರ್ಗ, ಎಸ್ಡಿಎಂಸಿ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.