ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Lingaraj Badiger
Updated On : 1 Aug 2013, 11:04 am

ಚಿತ್ತಾಪುರ: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಹಾಗೂ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ತಾಲೂಕಿನ ನ್ಯಾಯಬೆಲೆ ಅಂಗಡಿಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ತಾಲೂಕಾಧ್ಯಕ್ಷ ತಮ್ಮಣ್ಣ ಡಿಗ್ಗಿ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ಬಡವರಿಗೆ ಅನೂಕೂಲವಾಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರ 1ಕ್ಕೆ ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದೆ. ಆದರೆ ತಾಲೂಕಿನ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಕೆಜಿಗೆ 1ರ ಬದಲು 1.50 ಪೈಸೆಯಿಂದ 2ರವರೆಗೆ ಪಡೆಯಲಾಗುತ್ತಿದೆ ಎಂದು ಆರೋಪಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಟ್ರಾನ್ಸ್‌ಪೋರ್ಟ್ ವೆಚ್ಚವೆಂದು ಸಬೂಬು ಹೇಳಿ ಹೆಚ್ಚುವರಿ ಹಣ ಪಡೆಯಲಾಗುತ್ತಿದೆ. ಗೋದಿ, ಸಕ್ಕರೆ ನೀಡುತ್ತಿಲ್ಲ. ಅದರಲ್ಲಿ ಇಟಗಾ ಗ್ರಾಮದಲ್ಲಿ ವಿಪರೀತವಾಗಿ ಹಣ ಪಡೆಯಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ನಿರ್ಲಕ್ಷ್ಯ ವಹಿಸಿದರೆ ಬಿಜೆಪಿ ವತಿಯಿಂದ ಮುಂದೆ ಉಗ್ರ ಹೋರಾಟ ಮಾಡಲಾಗುವುದೆಂದು ಪ್ರತಿಭಟನಾಕಾರರು ಸಿಎಂಗೆ ಬರೆದ ಮನವಿ ಪತ್ರವನ್ನು ಶಿರಸ್ತೇದಾರ ಶ್ರೀನಿವಾಸ ಚಾಪೆಲ್ ಅವರಿಗೆ ಸಲ್ಲಿಸಿದರು. ಪುರಸಭೆ ಸದಸ್ಯ ದಶರಥ ತಳವಾರ, ಪಕ್ಷದ ತಾಲೂಕು ಕಾರ್ಯದರ್ಶಿ ಬಾಲಾಜಿ ಬುರುಬುರೆ, ವಿಷ್ಣು ಜಿತುರೆ, ಮಹೇಶ ಬಟಗೇರಿ, ದೀಪಕ ಹೊಸೂರಕರ್, ಚಂದ್ರು ಕಾಳಗಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement