ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಎರಡು ಡೆಂಘೀ ಪ್ರಕರಣ ರೋಗ ಮುಕ್ತ: ಸಜ್ಜನ್

Vishwanath S
Updated On : 2 Jun 2013, 12:35 pm

ಗುಲ್ಬರ್ಗ: ಜಿಲ್ಲೆಯ ಜೇವರ್ಗಿ ತಾಲೂಕಿನ ಅಂಕಲಗಿ ಮತ್ತು ಆಂದೋಲಾದಲ್ಲಿ ಎರಡು ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಈಗ ಇಬ್ಬರು ರೋಗಿಗಳು ಚಿಕಿತ್ಸೆ ಪಡೆದು ರೋಗ ಮುಕ್ತರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವರಾಜ ಸಜ್ಜನ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಡೆಂಘೀ ಹರಡುವ ಸಾಧ್ಯತೆಯನ್ನು ಅಂದಾಜಿಸಿ ಒಟ್ಟು 116 ಜನರ ರಕ್ತದ ಮಾದರಿ ಪಡೆದುಕೊಳ್ಳಲಾಗಿದ್ದು, ಎಲ್ಲವೂ ಶಂಕಿತವಾಗಿವೆ. ಇವುಗಳ ಕುರಿತು ಪರೀಕ್ಷೆ ಮಾಡಲಾಗುತ್ತಿದೆ. ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ  ಗುರುವಾರ ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಡೆಂಘೀ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಕಳೆದ ಬಾರಿ ದೊಡ್ಡ ಮಟ್ಟದಲ್ಲಿ ಡೆಂಘೀಗೆ ಕಾರಣವಾಗುವ ಈಡೀಸ್ ಸೊಳ್ಳೆಯ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಈ ಬಾರಿ ಈಗಾಗಲೇ ಆಶಾ ಕಾರ್ಯಕರ್ತೆಯ ಮುಖೇನ ಗ್ರಾಮಸ್ಥರಿಗೆ ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಡೆಂಘೀ ವಾರ್ಡ್ ನಿರ್ಮಿಸಲಾಗಿದೆ. ಡೆಂಘೀ ಬಂದ ಅಥವಾ ಮಾದರಿ ಆದ ರೋಗಿಯನ್ನು ಪ್ರತ್ಯೇಕ ವಾರ್ಡಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅದರೊಂದಿಗೆ ಪ್ಲೇಟ್‌ಲೆಟ್ ಕೌಂಟ್ ಪರೀಕ್ಷೆಯನ್ನು ವಾರದಲ್ಲಿ ಬಸವೇಶ್ವರ ಆಸ್ಪತ್ರೆಯಲ್ಲಿ ಮಾಡಲಾಗುತ್ತಿದೆ. ಅಂತಹದೊಂದು ವ್ಯವಸ್ಥೆಯನ್ನು ಖಾಸಗಿ ಆಸ್ಪತ್ರೆಯೊಂದಿಗೆ ಮಾಡಿಕೊಂಡಿದ್ದೇವೆ. ನಾಗರಿಕರು ಖಾಸಗಿ ಆಸ್ಪತ್ರೆಗೆ ಹೋಗದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ಬರುವಂತೆ ಸಜ್ಜನ್ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement