ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಡೆಂಘೀ ನಿಗ್ರಹ ಎಲ್ಲರ ಜವಾಬ್ದಾರಿ: ಡಾ. ಮಾಳ್ಗೆ

Vishwanath S
Updated On : 2 Jun 2013, 12:36 pm

ಯಾದಗಿರಿ: ತಾಲೂಕಿನ ಸೈದಾಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡೆಂಘೀ ಜ್ವರ ನಿಯಂತ್ರಣ ಕುರಿತ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತಂತೆ ವೈದ್ಯರು ಹಾಗೂ ಜನಪ್ರತಿನಿಧಿಗಳು ಸಭೆ ನಡೆಸಿ ಚರ್ಚಿಸಿದರು.
  ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದಿವಾಕರ ಮಾಳ್ಗೆ ಮಾತನಾಡಿ, ಡೆಂಘೀ ಜ್ವರ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇದಕ್ಕಾಗಿ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಬಯಲಿನಲ್ಲಿರುವ ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿಗಳನ್ನು ಮಳೆ ನೀರಿನಲ್ಲಿ ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ರೋಗಗಳು ಮನೆಯ ಪರಿಸರದಲ್ಲಿಯೇ ಉತ್ಪತ್ತಿಯಾಗುತ್ತವೆ. ಇದರ ನಿಯಂತ್ರಣ ನಿಮ್ಮ ಕೈಯಲ್ಲಿದೆ ಎಂದು ತಿಳಿಸಿದರು. ಗ್ರಾಪಂ ಉಪಾಧ್ಯಕ್ಷೆ ಲಲಿತಾ ವೆಂಕಟೇಶ ಅಧ್ಯಕ್ಷತೆ ವಹಸಿದ್ದರು. ಆಯಷ್ ವೈದ್ಯಾಧಿಕಾರಿ ಡಾ.ರಾಜೇಶ್ವರಿ, ಪಿಡಿಒ ಶಿವರಾಯ, ಅಬ್ದುಲ್, ಶೇಖ ಹುಸೇನ್, ಗ್ರಾಪಂ ಸದಸ್ಯರಾದ ಚಂದ್ರಶೇಖರ ವಾರದ, ಸುರೇಶ ಆನಂಪಲ್ಲಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಸೊಳ್ಳೆಗಳ ನಿಯಂತ್ರಣ, ಮನೆ ಮುಂದೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವುದರ ಮೂಲಕ ರೋಗದ ನಿಯಂತ್ರಣ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement