ಸ್ವಚ್ಫತೆ ಕಾಪಾಡಿ: ಜಿಲ್ಲಾಧಿಕಾರಿ
ಯಾದಗಿರಿ: ರಾಜ್ಯಾದ್ಯಂತ ಡೆಂಘೀ ಜ್ವರ ವ್ಯಾಪಿಸುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ ಎಚ್ಚರವಹಿಸಿ ಈ ರೋಗಕ್ಕೆ ಕಾರಣವಾಗಿರುವ ಸೊಳ್ಳೆಯ ನಿಯಂತ್ರಣಕ್ಕಾಗಿ ಎಲ್ಲರೂ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಡೆಂಘೀ ಜ್ವರ ನಿಯಂತ್ರಣ ಮುನ್ನೆಚ್ಚರಿಕೆ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಡೆಂಘೀ ಜ್ವರ ವೈರಸ್ನಿಂದ ಉಂಟಾಗುವ ಕಾಯಿಲೆಯಾಗಿದೆ. ಇದು ಸೋಂಕು ಹೊಂದಿದ ಈಡಿಸ್ ಈಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ನೀರಿನ ಸ್ವಚ್ಛತೆ ಬಗ್ಗೆ ಜಾಗೃತಿ ವಹಿಸುವಂತೆ ಸಲಹೆ ನೀಡಿದರು.