ಕೊಡಲಿಯಿಂದ ಹೊಡೆದು ವ್ಯಕ್ತಿ ಕೊಲೆ
ಗುಲ್ಬರ್ಗ: ತೋಟದ ಮನೆಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನಿಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಅಫಜಲ್ಪುರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಸಂಗಣ್ಣ ತಂದೆ ಸಿದ್ರಾಮಪ್ಪ(50) ಕೊಲೆಗೀಡಾದ ನತದೃಷ್ಟ. ಈತ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಕೊಲೆಗಾರರು ಕೊಡಲಿಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆ ಮಾಡಿದವರು ಯಾರು, ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬದು ತಿಳಿದು ಬಂದಿಲ್ಲ.
ಸುದ್ದಿ ತಿಳಿದ ತಕ್ಷಣ ಆಳಂದ ಸಿಪಿಐ, ಅಫಜಲ್ಪುರ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಅಫಜಲ್ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.