ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಖಾತ್ರಿಯಲ್ಲಿ ಅವ್ಯವಹಾರ, ಕ್ರಮಕ್ಕೆ ಆಗ್ರಹ

Lingaraj Badiger
Updated On : 5 Jun 2013, 11:21 am

ಶಹಾಪುರ: ಸರ್ಕಾರದ ಜನಪರ ಯೋಜನೆಗಳು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಅಸಮರ್ಥರಾದ ವನದುರ್ಗ ಗ್ರಾಪಂ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಹಾಪುರ ತಾಲೂಕು ಕೊರಮ ಸಮಾಜದ ಅಧ್ಯಕ್ಷ ಯಲ್ಲಪ್ಪ ಭಜಂತ್ರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ್ದು, ಉದ್ಯೋಗ ಖಾತ್ರಿ ಯೋಜನೆಡಿಯಲ್ಲಿ ಸ್ಥಿತಿವಂತ ಕುಟುಂಬದ ಸದಸ್ಯರ ಹೆಸರಿನಲ್ಲಿ ಜಾಬ್ ಕಾರ್ಡ್ ನೀಡಿ ಕಾಮಗಾರಿಗಳನ್ನು ಮಾಡದೆ ಹಣ ಕೊಳ್ಳೆ ಹೊಡೆಯುತ್ತಿದ್ದಾರೆ. ಇದರಿಂದ ಬಡವರು ಕೂಲಿ ಕೆಲಸವಿಲ್ಲದೆ ವಲಸೆ ಹೋಗುವುದು ಹೆಚ್ಚಾಗುತ್ತಿದೆ. ಇಂಥ ಅಧಿಕಾರಿಯನ್ನು ಕೂಡಲೇ ವಜಾಗೊಳಿಸಿ ಇವರ ಅವಧಿಯಲ್ಲಿ ನಡೆದ ಹಲವಾರು ಯೋಜನೆಗಳ ಪ್ರಗತಿ ಪರೀಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ, ಪಂಚಾಯತರಾಜ್ ಸಚಿವರಿಗೆ ಮನವಿ ಮಾಡಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement