ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಮೋದಿ ಆಯ್ಕೆಗೆ ಬಿಜೆಪಿ ವಿಜಯೋತ್ಸವ

Lingaraj Badiger
Updated On : 11 Jun 2013, 11:30 am

ಯಾದಗಿರಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಸುಭಾಷ್ ಚೌಕದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಜಿಲ್ಲಾ ಬಿಜೆಪಿ ಮುಖಂಡ ಚಂದ್ರಶೇಖರಗೌಡ ಮಾಗನೂರ ಮಾತನಾಡಿ, ಬರುವ ಲೋಕಸಭಾ ಚುಣಾವಣೆಯಲ್ಲಿ ಬಿಜೆಪಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದು ಕಾರ್ಯಕರ್ತರಲ್ಲಿ ಹುಮ್ಮಸ್ಸು ತಂದಿದೆ. ಆದ್ದರಿಂದ ಎಲ್ಲರೂ ಸಂಘಟಿತರಾಗಿ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಹಾಗೂ ಮೋದಿ ಕೈಬಲಪಡಿಸಲು ಶ್ರಮಿಸಬೇಕೆಂದರು. ವೆಂಕರಟರಡ್ಡಿ ಅಬ್ಬೆತುಮಕೂರ, ಮಥಿನ್ ಚೌಧರಿ, ಬಸಣ್ಣಗೌಡ ನಾಯ್ಕಲ್, ಭೀಮರಡ್ಡಿ, ಸುರೇಶ ಅಂಬಿಗೇರ, ಶರಣು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement