ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಾಂತಿ- ಭೇದಿ: 28 ಮಂದಿ ಅಸ್ವಸ್ಥ

Mainashree
Updated On : 15 Jun 2013, 10:45 am

ಗುಲ್ಬರ್ಗ/ಶಹಾಬಾದ್: ಚಿತ್ತಾಪುರ ತಾಲೂಕಿನ ರಾವೂರ ಗ್ರಾಪಂ ವ್ಯಾಪ್ತಿಯ ಲಕ್ಷ್ಮೀಪುರವಾಡಿಯಲ್ಲಿ ಕಲುಷಿತ ಬಾವಿ ನೀರು ಕುಡಿದು 28 ಜನರು ವಾಂತಿ- ಭೇದಿಯಿಂದ ನರಳುತ್ತಿದ್ದು, ಅವರಿಗೆ ರಾವೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ತಾಪುರಕ್ಕೆ ಕಳುಹಿಸಲಾಗಿದೆ. ಗ್ರಾಮದಲ್ಲಿಯ 100 ವರ್ಷ ಹಳೆಯದ್ದು ಎನ್ನಲಾದ ಬಾವಿ ನೀರನ್ನು ಗ್ರಾಮಸ್ಥರು ಬಳಸುತ್ತಿದ್ದು, ಇದರ ನೀರು ಕೊಳಕು ನೀರು ಸೇರಿ ಕಲುಷಿತಗೊಂಡಿದೆ. ಇದೇ ನೀರನ್ನು ಬಳಸುತ್ತಿದ್ದರಿಂದ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ಸರ್ಕಾರಿ ವೈದ್ಯಾಧಿಕಾರಿ ಡಾ.ಶಿವಶರಣಪ್ಪ ಕಾಶೆಟ್ಟಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement