ಕೇಂದ್ರೀಯ ವಿವಿ- ಹೈಕಶಿ ಒಡಂಬಡಿಕೆ
ಗುಲ್ಬರ್ಗ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಸ್ಥಳೀಯ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ನಡುವೆ ಪರಸ್ಪರ ಸಹಾಯ ಹಸ್ತ ಕೋರಿ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಸ್.ಎಸ್. ಮೂರ್ತಿ ಮತ್ತು ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎಸ್. ಹೆಬ್ಬಾಳ ಅವರು ಒಡಂಬಡಿಕೆಗೆ ಸಹಿ ಹಾಕಿದ್ದಾರೆ.
ಈ ಒಡಂಬಡಿಕೆಯಂತೆ ಪ್ರಸ್ತುತ ಶೈಕ್ಷಣಿಕ ವರ್ಷ ಕೇಂದ್ರೀಯ ವಿಶ್ವವಿದ್ಯಾಲಯವು ಹೊಸ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಬೇಕಾಗುವ ಬೋಧಕ ಸಿಬ್ಬಂದಿಯನ್ನು ಕೊಡಲು ಹಾಗೂ ಪ್ರಾಯೋಗಿಕ ವರ್ಗಗಳನ್ನು ನಡೆಸಲು ಪಿಡಿಎ ಎಂಜಿನಿಯರಿಂಗ್ ಕಾಲೇಜು ಒಪ್ಪಿಕೊಂಡಿದೆ.
ಈ ಎರಡು ಸಂಸ್ಥೆಗಳ ನಡುವಿನ ಒಪ್ಪಂದದಿಂದ ಈ ಭಾಗದಲ್ಲಿ ತಾಂತ್ರಿಕ ಶಿಕ್ಷಣ ತ್ವರಿತಗತಿಯಲ್ಲಿ ಅಭಿವೃದ್ಧಿಪಡಿಸಬಹುದು. ಈ ಸಂದರ್ಭದಲ್ಲಿ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ಎಲ್ಲ ವಿಭಾಗಗಳ ಮುಖ್ಯಸ್ಥರು ಕೇಂದ್ರೀಯ ವಿಶ್ವವಿದ್ಯಾಲಯದ ರಿಜಿಸ್ಟಾರ್, ಟೆಕ್ಯೂಫ್ ಎರಡನೇ ಹಂತದ ರಾಜ್ಯ ಸರ್ಕಾರದ ಅಧಿಕಾರಿಗಳು ಹಾಜರಿದ್ದರು.