ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕಸದ ರಾಶಿ; ಸ್ವಚ್ಛತೆಗೆ ದಸಂಸ ಆಗ್ರಹ

Vishwanath S
Updated On : 24 Jun 2013, 11:28 am

ಚಿತ್ತಾಪುರ: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಸದ ರಾಶಿಯಿಂದ ರಸ್ತೆ ಬದಿ ಗಬ್ಬೆದ್ದು ನಾರುತ್ತಿದೆ. ಇದನ್ನು ಕೂಡಲೇ ಸ್ವಚ್ಛಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ತಾಲೂಕು ಸಂಚಾಲಕ ನಾಗೇಶ ಹಲಗಿ ಒತ್ತಾಯಿಸಿದ್ದಾರೆ.
ಇಲ್ಲಿಯ ಪೊಲೀಸ್ ಠಾಣೆ ಹತ್ತಿರದ ಬಸವ ನಗರಕ್ಕೆ ಹೋಗುವ ರಸ್ತೆಯಲ್ಲಿ ರಸ್ತೆ ಕಸದ ಕಾಶಿ ತುಂಬಿ ತುಳುಕುತ್ತಿದೆ. ಅದರಂತೆ ಎಲ್ಲ ವಾರ್ಡ್‌ಗಳಲ್ಲಿ ಕಸದ ರಾಶಿ ಎದ್ದು ಕಾಣುತ್ತಿದೆ. ಅಲ್ಲಿ ತಿರುಗಾಡುವ ಜನ ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾರ್ಣವಾಗಿದೆ ಎಂದು ಆರೋಪಿಸಿದ್ದಾರೆ.
ಪುರಸಭೆ ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿದರೂ ಯಾರೂ ಗಮನ ಹರಿಸುತ್ತಿಲ್ಲ. ಇದರಿಂದ ಬಡಾವಣೆಯ ಜನರಿಗೆ ಸಾಂಕ್ರಾಮಿಕ ರೋಗ ಭೀತಿ ಕಾಡುತ್ತಿದೆ.
ಕೂಡಲೇ ಕಸ ವಿಲೇವಾರಿ ಮಾಡಬೇಕು. ಮೂರು ದಿನಗಳೊಳಗೆ ಕಸ ವಿಲೇವಾರಿ ಮಾಡದಿದ್ದರೆ ಪುರಸಭೆಯ ಮುಂದೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement