ಬಾಲಕಾರ್ಮಿಕ ಪದ್ಧತಿ ನಿಷೇಧ ದಿನಾಚರಣೆ
ಗುಲ್ಬರ್ಗ, ಚಿತ್ತಾಪುರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಚಿತ್ತಾಪುರ ಶಾಲಾ ಆವರಣದಲ್ಲಿ ಬಾಲಕಾರ್ಮಿಕ ನಿಷೇಧ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಚಿತ್ತಾಪುರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಚಿತ್ತಾಪುರ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಡಿ.ಪಿ. ನಾಯಕ ಉದ್ಘಾಟಿಸಿ ಮಾತನಾಡಿದರು. ಚಿತ್ತಾಪುರ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಕೆ.ಎಸ್. ರೊಟ್ಟೇರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ತಾಪುರ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗಂಗಾಧರ ಸಾಲಿಮಠ, ಸರ್ಕಾರಿ ಸಹಾಯಕ ಅಭಿಯೋಜಕ ಬಸವಂತರೆಡ್ಡಿ ಪಾಟೀಲ್, ತಹಸೀಲ್ದಾರ್ ಮಲ್ಲೇಶ ತಂಗಾ, ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿರಾದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವೀಂದ್ರ ಎಸ್. ರತ್ನಾಕರ್, ವೃತ್ತ ನಿರೀಕ್ಷಕ ಚಂದ್ರಕಾಂತ ಪೂಜಾರಿ, ನ್ಯಾಯವಾದಿ ಚಂದ್ರಶೇಖರ ಅವಂಟಿ ಅತಿಥಿಗಳಾಗಿ ಆಗಮಿಸಿದ್ದರು.
ನ್ಯಾಯವಾದಿ ಕು. ಮಂಜುಳಾ ಒಡೆಯರ ಅವರು ಮಕ್ಕಳ ಪಾಲನೆ ಮತ್ತು ಸಂರಕ್ಷಣೆ ಬಗ್ಗೆ ಮಾತನಾಡಿದರು.