ಅಕ್ರಮ ಮರಳು ಸಾಗಣೆ; 4 ಟ್ರ್ಯಾಕ್ಟರ್ ವಶಕ್ಕೆ
ಗುಲ್ಬರ್ಗ: ಸೇಡಂ ತಾಲೂಕಿನ ಮದರಿ ಗ್ರಾಮದಿಂದ ಸೇಡಂ ನಗರಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 4 ಟ್ರ್ಯಾಕ್ಟರ್‌ಗಳನ್ನು ಜಪ್ತಿ ಮಾಡಿ ಪೊಲೀಸ್ ವಶಕ್ಕೆ ನೀಡಲಾಗಿದೆ ಎಂದು ಸೇಡಂ ತಹಸೀಲ್ದಾರ್ ಪ್ರಕಾಶ ಕುದರಿ ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಮರಳು ತುಂಬಿಕೊಂಡು ವಾಸವದತ್ತಾ ಕಂಪನಿ ಮಾರ್ಗವಾಗಿ ಬರುತ್ತಿದ್ದ 4 ಟ್ರ್ಯಾಕ್ಟರ್‌ಗಳ ಮೇಲೆ ದಾಳಿ ನಡೆಸಿ ಜಪ್ತಿ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ, ಆರ್‌ಟಿಒ ಮತ್ತು ಭೂ ಗಣಿ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ರಾಜಶ್ರೀ ಸಿಮೆಂಟ್ ಕಂಪನಿಯಲ್ಲಿ ಅಕ್ರಮವಾಗಿ ಮರಳು ಶೇಖರಿಸಿದ ವರದಿಯನ್ನು ಸೇಡಂ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಿಗೆ ಸೂಚಿಸಲಾಗಿದ್ದು, ವರದಿ ಪಡೆದು ಸೂಕ್ತ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.