ಶಿಕ್ಷಕರ ವರ್ಗಾವಣೆ: ವೈದ್ಯಕೀಯ ಪರೀಕ್ಷೆ
ಗುಲ್ಬರ್ಗ: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗಳನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು- 2007ರಂತೆ ಕೌನ್ಸೆಲಿಂಗ್ ಮೂಲಕ ನಡೆಸುವ ಪ್ರಕ್ರಿಯೆಯಲ್ಲಿ ತೀವ್ರ ಕಾಯಿಲೆ ಪ್ರಕರಣದಲ್ಲಿ(ಕ್ಯಾನ್ಸರ್, ಕಿಡ್ನಿ ವೈಫಲ್ಯ, ಹೃದಯ ಸಂಬಂಧ ಕಾಯಿಲೆ) ಜಿಲ್ಲೆಯಿಂದ ಅರ್ಜಿ ಸಲ್ಲಿಸಿರುವ ಶಿಕ್ಷಕರು ಜೂ.25ರಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ, ತೀವ್ರ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯೊಂದಿಗೆ ಅವರ ತೀವ್ರತರ ಕಾಯಿಲೆಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ದಲ್ಲಿ ನೋಡಬಹುದು.