ಕತ್ತಲೆಯಲ್ಲಿ ಮೊರಾರ್ಜಿ ವಸತಿ ಶಾಲಾ ಮಕ್ಕಳು
ಶಹಾಪುರ: ಇಲ್ಲಿಯ ದೊರಿಗುಡ್ಡ ಮೊರಾರ್ಜಿ ವಸತಿ ಶಾಲೆ ಪಟ್ಟಣದ ಖಾಸಗಿ ಕಟ್ಟಡವೊಂದರಲ್ಲಿ ನಡೆಯುತ್ತಿದೆ. ವಿದ್ಯುತ್ ಪರಿವರ್ತಕ ಸುಟ್ಟು ಕಳೆದ ಮೂರು ದಿನದಿಂದ ಕತ್ತಲೆಯಲ್ಲಿ ವಸತಿ ಶಾಲೆಯ ಮಕ್ಕಳು ಕಾಲ ಕಳೆಯುವಂತಾಗಿದೆ. ಈ ಕುರಿತು ಅಧಿಕಾರಿಗಳು ಕಾಳಜಿ ವಹಿಸದೇ ಇರುವುದು ತೊಂದರೆಗೆ ಕಾರಣವಾಗಿದೆ. ವಿದ್ಯಾರ್ಥಿಗಳಿಗೆ ನೀರಿನ ಬವಣೆ ಉಂಟಾಗಿದೆ. ವಸತಿ ಶಾಲೆಯಲ್ಲಿ ಸರ್ಕಾರ ಮಕ್ಕಳಿಗೆ ವಿಶೇಷ ವ್ಯವಸ್ಥೆ ಕಲ್ಪಿಸುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸವಾಗುತ್ತದೆ ಎಂಬ ಭಾವನೆಯಿಂದ ಗ್ರಾಮೀಣ ಭಾಗದ ಪಾಲಕರು ತಮ್ಮ ಮಕ್ಕಳನ್ನು ವಸತಿ ಶಾಲೆಗೆ ಸೇರಿಸುತ್ತಾರೆ. ಆದರೆ ಇಲ್ಲಿನ ಅವ್ಯವಸ್ಥೆಯಿಂದ ಮಕ್ಕಳು ಸೌಲಭ್ಯ ವಂಚಿತರಾಗುತ್ತಿದ್ದಾರೆ.
--