ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

Lingaraj Badiger
Updated On : 27 Jun 2013, 10:59 am

ಗುಲ್ಬರ್ಗ: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2012ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ ವಿವಿಧ ಕೃತಿಗಳನ್ನು ಆಹ್ವಾನಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ತಿಳಿಸಿದ್ದಾರೆ.
ಕಥಾ ಪ್ರಕಾರ: ಕೊಡಗಿನ ಎಸ್.ಎಸ್. ವಿಜಯಶಂಕರ ಅವರು ಕಸಾಪದಲ್ಲಿ ಭಾರತೀಸುತ ಸ್ಮಾರಕ ದತ್ತಿ ಸ್ಥಾಪಿಸಿದ್ದು, ಕಳೆದ ವರ್ಷದ ಅವಧಿಯಲ್ಲಿ ಪ್ರಕಟವಾಗಿರುವ ಕನ್ನಡ ಕಥಾ ಸಂಕಲನಕ್ಕೆ 5 ಸಾವಿರ ನಗದು ಮತ್ತು ಪ್ರಶಸ್ತಿ ನೀಡಲಾಗುತ್ತಿದ್ದು, 3 ಪ್ರತಿಗಳನ್ನು ಕಳುಹಿಸಬೇಕು.
ದಲಿತ ಸಾಹಿತ್ಯ: 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳಾಧ್ಯಕ್ಷ ಡಾ. ಎಲ್.ಬಸವರಾಜು ಅವರು ಅಮೃತ ಮಹೋತ್ಸವ ಸವಿ ನೆನಪು ದತ್ತಿ ಸ್ಥಾಪಿಸಿದ್ದು, 2012ನೇ ಸಾಲಿನ ಉತ್ತಮ ದಲಿತ ಸಾಹಿತ್ಯ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, 5 ಸಾವಿರ ನಗದು ಮತ್ತು ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ. 3 ಪುಸ್ತಕಗಳನ್ನು ಕಳುಹಿಸಬೇಕು.
ಜೈನ ಕೃತಿ: ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ಸ್ವಸ್ತಿಶ್ರೀ ದೇವೇಂದ್ರ ಕೀರ್ತಿ ಪ್ರಶಸ್ತಿ ದತ್ತಿ ಸ್ಥಾಪಿಸಿದ್ದು, ಜೈನ ಧರ್ಮಕ್ಕೆ ಸಂಬಂಧಿಸಿದ ಶ್ರೇಷ್ಠ ಗ್ರಂಥವೊಂದಕ್ಕೆ 6 ಸಾವಿರ ನಗದು ಪುರಸ್ಕಾರ ನೀಡಲಾಗುತ್ತಿದ್ದು, ಕೃತಿಗಳನ್ನು ಆಹ್ವಾನಿಸಲಾಗಿದೆ. 3 ಪುಸ್ತಕಗಳು ಕಳುಹಿಸಬೇಕು.
ಮೇಲಿನ ದತ್ತಿ ಪ್ರಶಸ್ತಿಗಳಿಗಾಗಿ ಪುಸ್ತಕ ಕಳುಹಿಸಲು ಜೂ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೊ. 080- 26623584 ಹಾಗೂ ಸಂಗಮೇಶ ಬಾದವಾಡಗಿ, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 18 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement