ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕುಡಿವ ನೀರಿನ ಯೋಜನೆ ನೆನೆಗುದಿಗೆ

Rashmi Kasaragodu
Updated On : 28 Jun 2013, 10:21 am

ಕನ್ನಡಪ್ರಭ ವಾರ್ತೆ  ಕೆಂಭಾವಿ  ಜೂ.27
ಸಮೀಪದ ಕಿರದಳ್ಳಿ ತಾಂಡಾಕ್ಕೆ ಪಂಚಾಯತ ರಾಜ್ ಎಂಜಿನಿಯರಿಂಗ್ ಇಲಾಖೆ ಸೂಪರಿಂಟೆಂಡೆಂಟ್ ಎಂಜಿನಿಯರ್ ಸೂರ್ಯಕಾಂತ ಶೃಂಗೇರಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  ನಂತರ ಮಾತನಾಡಿದ ಅವರು, ಕಿರದಳ್ಳಿ ಗ್ರಾಮ ಸೇರಿದಂತೆ 19 ಗ್ರಾಮಗಳಿಗೆ ಶುದ್ದ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರ 15 ಕೋಟಿಯ ಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಆರ್ಸೆನಿಕ್ ಪೀಡಿತ 19 ಗ್ರಾಮಗಳಿಗೆ ಶುದ್ಧ ನೀರು ಕೊಡುವ ಯೋಜನೆಗೆ ಮಂಜೂರಾತಿ ದೊರಕಿದ್ದರೂ ಕೃಷ್ಣಾ ಭಾಗ್ಯ ಜಲ ನಿಗಮದ ಸ್ಥಳೀಯ ಅಧಿಕಾರಿಗಳು ಇದಕ್ಕೆ ಸರಿಯಾಗಿ ಸ್ಪಂದಿಸದ ಕಾರಣ ಯೋಜನೆ ನೆನೆಗುದಿಗೆ ಬಿದ್ದಿದೆ. ನಿವೇಶನ ಸಿಗದೇ ಇರುವುದರಿಂದ ಶುದ್ಧೀಕರಣ ಘಟಕ ಸ್ಥಾಪನೆಗೆ ವಿಳಂಬವಾಗುತ್ತಿದೆ ಎಂದು ತಿಳಿಸಿದರು.
ಅಧಿಕಾರಿಗಳ ಅಸಹಕಾರದಿಂದ ವಿಳಂಬ: ನಿಗಮದ ವ್ಯವಸ್ಥಾಪಕ ನಿರ್ದೇಶಕರು ಜಮೀನು ಹಸ್ತಾಂತರ ಮಾಡಲು ಹಸಿರು ನಿಶಾನೆ ತೋರಿದ್ದರೂ ಕೆಳ ಮಟ್ಟದ ಅಧಿಕಾರಿಗಳು ಸಹಕರಿಸುತ್ತಿಲ್ಲ. ಆದ್ದರಿಂದ ಟೆಂಡರ್ ಪ್ರಕ್ರಿಯೆ ನಡೆಸಲು ವಿಳಂಬವಾಗುತ್ತಿದೆ. ಈ ಬಗ್ಗೆ ನಿಗಮದ ಅಧಿಕಾರಿಗಳ ಬಳಿ ನಮ್ಮ ಅಧಿಕಾರಿಗಳನ್ನು ಕಳಿಸಿ ಜಮೀನು ಹಸ್ತಾಂತರ ಮಾಡಿಕೊಳ್ಳಲಾಗುವುದು.
  ಅಲ್ಲದೆ 19 ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಆದರೆ ವಿದ್ಯುತ್ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ ವಿದ್ಯುತ್ ಸಂಪರ್ಕ ಪಡೆದು ಘಟಕಗಳನ್ನು ಪ್ರಾರಂಭಿಸಲಾಗುವುದು. ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಜು. 2ರಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ ಪಾಟೀಲ ಅವರು ಯಾದಗಿರಿಗೆ ಬರುತ್ತಿದ್ದು, ಅಷ್ಟರೊಳಗೆ ಜಮೀನು ಹಸ್ತಾಂತರ ಮಾಡಿಕೊಂದು ವರದಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.
  ಇಇ ಎಂ.ಆರ್. ಕಂದಾರೆ, ಎಇಇ ಬಸಯ್ಯ ಹಿರೇಮಠ, ಜೆಇಗಳಾದ ಮರೆಪ್ಪ, ಎಸ್.ಜಿ. ಪಾಟೀಲ, ಭೀಮರಡ್ಡಿ, ರಾಘವೇಂದ್ರರಾವ ಕುಲಕರ್ಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement