ಡಿಕ್ಕಿ: ಬಾಲಕ ಸಾವು
ಯಾದಗಿರಿ: ಬೈಕ್- ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಮುದ್ನಾಳ ಕ್ರಾಸ್ನಲ್ಲಿ ಗುರುವಾರ ಸಂಭವಿಸಿದೆ. ಪ್ರದೀಪ(8) ಮೃತ ಬಾಲಕ. ಈತ ಸ್ಥಳೀಯ ಮಹಾವೀರ ವಿದ್ಯಾಮಂದಿರದ ವಿದ್ಯಾರ್ಥಿ ಎನ್ನಲಾಗಿದೆ. ಬೈಕ್ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. ಬೈಕ್ನಲ್ಲಿದ್ದ ಇತರ ಮೂವರಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.