ಇಂದು ಅಭಿನಂದನಾ ಸಮಾರಂಭ
ಜೇವರ್ಗಿ: ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಡಾ. ಅಜಯಸಿಂಗ್ ಅವರನ್ನು ಅಭೂತಪೂರ್ವ ಗೆಲವು ಸಾಧಿಸಲು ಕಾರಣಿಕರ್ತರಾದ ಕ್ಷೇತ್ರದ ಸರ್ವ ಮತದಾರರಿಗೂ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಜೇವರ್ಗಿ ಹಾಗೂ ಯಡ್ರಾಮಿ ಬ್ಲಾಕ್ ಕಾಂಗ್ರೆಸ್ನಿಂದ ಜೂ.30 ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಪಟ್ಟಣದ ಶಹಾಪುರ ರಸ್ತೆಯಲ್ಲಿರುವ ಕಲ್ಯಾಣ ಮಂಟಪವೊಂದರಲ್ಲಿ ಭಾನುವಾರ ಬೆಳಗ್ಗೆ 11ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಧರ್ಮಸಿಂಗ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.