ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಮನೆ ಹಂಚಿಕೆಯಲ್ಲಿ ಅವ್ಯವಹಾರ: ಆರೋಪ

Rashmi Kasaragodu
Updated On : 30 Jun 2013, 12:19 pm

ಯಾದಗಿರಿ: ತಾಲೂಕಿನ ಸೈದಾಪುರ ಗ್ರಾಪಂನಲ್ಲಿ 2012ನೇ ಸಾಲಿನ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರಿಗೆ ವಿಶೇಷ ಯೋಜನೆಡಿಯಲ್ಲಿ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಪರ ಜಿಲ್ಲಾಧಿಕಾರಿ ಜಹಿರಾ ನಸೀಮ್ ಅವರಿಗೆ ಶನಿವಾರ ಮನವಿ ಸಲ್ಲಿಸಿತು.
ಸಮಿತಿ ಸಂಚಾಲಕ ಕ್ರಿಸ್ಟೋಫರ್ ಮಾತನಾಡಿ, ಗ್ರಾಮ ಸಭೆಯಲ್ಲಿ ಸೈದಾಪುರ ಮೂಲ ನಿವಾಸಿಗಳನ್ನು ಬಿಟ್ಟು ತಮ್ಮ ಮನಸ್ಸಿಗೆ ಬಂದಂತೆ ಫನಾಭವಿಗಳನ್ನು ಆಯ್ಕೆ ಮಾಡಲಾಗಿದೆ.   ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿವರಾಯ ಗ್ರಾಮ ಸಭೆಯನ್ನು ನಡೆಸಿ ಮಧ್ಯವರ್ತಿಗಳೊಂದಿಗೆ ಕೂಡಿಕೊಂಡು ಅರ್ಹ ಫಲಾನುಭವಿಗಳಿಗೆ ಮನೆ ನಿಡದೇ ಆರ್ಥಿಕವಾಗಿ ಉತ್ತಮವಾಗಿರುವವರನ್ನು ಆಯ್ಕೆ ಮಾಡಿದ್ದಾರೆ ಎಂದು ದೂರಿದರು.ಸೈದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರದೇ ಇರುವ ಫಲಾನುಭವಿಗಳ ಹತ್ತಿರ ಪಿಡಿಒ ಹಣದ ಆಸೆಗಾಗಿ ಒಬ್ಬ ಫಲಾನುಭವಿಯಿಂದ ತಲಾ ರು. 5 ಸಾವಿರ ಮಧ್ಯವರ್ತಿಗಳಿಂದ ಪಡೆದು ಆಯ್ಕೆ ಮಾಡಿದ್ದಾರೆ. ಅಂತಹ ಫಲಾನುಭವಿಗಳ ಪಟ್ಟಿಯನ್ನು ತಕ್ಷಣ ರದ್ದುಪಡಿಸಬೇಕು.  
 ಈ ವಿಶೇಷ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳನ್ನು ರದ್ದು ಪಡಿಸಿ ಊರಿನ ಪ್ರಮುಖರ ಮುಂದೆ ಗ್ರಾಮ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕೆಂದು ಒತ್ತಾಯಿಸಿದರು. ಇಲ್ಲದಿದ್ದರೆ ಸೈದಾಪುರ ಗ್ರಾಪಂ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement