ವೈದ್ಯಕೀಯ ಶಿಕ್ಷಣ ರಾಜ್ಯ ಸಚಿವರ ಪ್ರವಾಸ
ಗುಲ್ಬರ್ಗ: ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಜುಲೈ 1ರಂದು ಬೆಳಗ್ಗೆ 10ಕ್ಕೆ ಆಗಮಿಸಿ ಹೈ-ಕ ಪ್ರದೇಶದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಭಾರತ ಸಂವಿಧಾನದ ಅನುಚ್ಛೇದ 371ಜೆ ಅನುಷ್ಠಾನಗೊಳಿಸುವ ಸಂಬಂಧ ಸಚಿವ ಸಂಪುಟದ ಉಪ ಸಮಿತಿಯು ಹೈದ್ರಾ ಬಾದ್ ಕರ್ನಾಟಕ ಹೋರಾಟ ಸಮಿತಿ ಪದಾಧಿಕಾರಿಗಳು ಮತ್ತು ಸಾರ್ವಜನಿಕರ ಅಭಿಪ್ರಾಯವನ್ನು ಜಿಲ್ಲಾವಾರು ಸಂಗ್ರಹಿಸುವರು.
ಬೆಳಗ್ಗೆ 10ರಿಂದ ಮಧ್ಯಾಹ್ನ 12ಗಂಟೆಯವರೆಗೆ ಬೀದರ್ ಜಿಲ್ಲೆಯ, ಮಧ್ಯಾಹ್ನ 12ರಿಂದ 2ರವರೆಗೆ ಯಾದಗಿರಿ ಜಿಲ್ಲೆಯ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಗುಲ್ಬರ್ಗ ಜಿಲ್ಲೆಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ರಾತ್ರಿ 8.45ಕ್ಕೆ ಯಶವಂತಪುರ ಎಕ್ಸ್ಪ್ರೆಸ್ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.