ಶಿಕ್ಷಣದಿಂದ ಧರ್ಮ ಜಾಗೃತಿ
ಸೇಡಂ: ದೇಶದಲ್ಲಿ ಸಂಸ್ಕೃತಿ, ಸಂಪ್ರದಾಯಗಳು ಗುಣಮಟ್ಟ ಕಳೆದುಕೊಳ್ಳುತ್ತಿದ್ದು, ಸಂಸ್ಕಾರ ಭರಿತ ಶಿಕ್ಷಣದಿಂದ ಧರ್ಮ ಜಾಗೃತಿಯಾಗಬೇಕೆಂದು ಮುಗಳನಾಗಾಂವನ ಅಭಿನವ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.ಪಟ್ಟಣದ ಹೊರವಲಯದಲ್ಲಿರುವ ವಿಶ್ವಗಂಗಾ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಉದ್ಘಾಟನೆ ಹಾಗೂ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.