ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಅಚ್ಚುಕಟ್ಟಾಗಿ ಪಿಯು ಪರೀಕ್ಷೆ ನಡೆಸಲು ನಸೀಮ್ ಸೂಚನೆ

Lingaraj Badiger
Updated On : 5 Mar 2013, 10:57 am

ಯಾದಗಿರಿ: ಮಾ.13ರಿಂದ 28ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಜಹೀರಾ ನಸೀಮ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ಸೋಮವಾರ ನಡೆಸಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಪರೀಕ್ಷೆ ಸಂದರ್ಭಗಳಲ್ಲಿ ಎಲ್ಲ 12 ಪರೀಕ್ಷಾ ಕೇಂದ್ರಗಳ ಸುತ್ತ 144ನೇ ಕಲಂ ಅನ್ವಯ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗುತ್ತದೆ. ವಿದ್ಯಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜಿಸಿದ ಸಿಬ್ಬಂದಿಗೆ ಮಾತ್ರ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಕ್ಕೆ ಅವಕಾಶವಿದ್ದು, ಸಿಬ್ಬಂದಿಗೆ ಗುರುತಿನ ಚೀಟಿಯನ್ನು ನೀಡುವಂತೆ ಸೂಚಿಸಿದರು.
ಸುಸೂತ್ರವಾಗಿ ನಡೆಯಲಿ: ಪರೀಕ್ಷಾ ಕೇಂದ್ರಗಳ ಸುತ್ತ ಸ್ವಚ್ಫತೆ ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯವಸ್ಥಿತವಾದ ಆಸನದ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಒಯ್ಯುವುದನ್ನು ನಿಷೇಧಿಸಬೇಕು. ಒಟ್ಟಾರೆ ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಇತ್ಯಾದಿ ಅಕ್ರಮ ನಡೆಯದಂತೆ ಎಚ್ಚರ ವಹಿಸಿ ಸುಸೂತ್ರವಾಗಿ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.
ಒಟ್ಟು 12 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. 6,804 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಅಧೀಕ್ಷಕರನ್ನು ನೇಮಿಸಲಾಗಿದೆ. ಒಟ್ಟು 6 ಜಾಗೃತ ದಳಗಳನ್ನು ರಚಿಸಲಾಗಿದೆ. ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಿಕೊಂಡು ಪರೀಕ್ಷೆ ಪಾರದರ್ಶಕ ರೀತಿಯಲ್ಲಿ ನಡೆಯುವಂತೆ  ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement