ಗ್ರಾಮಿಣರಲ್ಲಿ ಆರೋಗ್ಯ ಜಾಗೃತಿ ಅವಶ್ಯ
ಅಫಜಲ್ಪುರ: ಗ್ರಾಮಿಣ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಜಾಗೃತಿ ಕೊರತೆಯಿಂದ ನಾನಾ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಅವರಿಗೆ ರೋಗಗಳ ಮುಂಜಾಗ್ರತೆ ಕ್ರಮಗಳ ಬಗ್ಗೆ ಮಾಹಿತಿ ನೀಡುವುದು ನಮ್ಮ ಜವಾಬ್ದಾರಿ ಎಂದು ಆರೋಗ್ಯ ಕ್ಷೇತ್ರ ಶೀಕ್ಷಣಾಧಿಕಾರಿ ಶಶಿಧರ ಭಳೆ ಹೇಳಿದರು. ಅವರು ತಾಲೂಕಿನ ಭೈರಾಮಡಗಿ ಸರ್ಕಾರಿ ಪ್ರೌಡಶಾಲೆಯಲ್ಲಿ ತಾಲೂಕಿನ ವಿಜ್ಞಾನ ಕೇಂದ್ರದ ವತಿಯಿಂದ ಸಾಂಕ್ರಾಮಿಕ ರೋಗ ಹರಡಿವಿಕೆ ಮತ್ತು ತಡೆಗಟ್ಟುವಿಕೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೀಟನಾಶಕ ತಜ್ಞ ಚಾಮರಾಜ ಮಾತನಾಡಿದರು. ಮುಖ್ಯೋಪಾಧ್ಯಾಯ ಶಿವಪುತ್ರ, ವಿಜ್ಞಾನ ಕೇಂದ್ರದ ಸಂಚಾಲಕಿ ವಿಜಯಶ್ರೀ, ಎಂ.ಎಚ್. ಬಗಲಿ, ವಾಣಿಶ್ರೀ, ಆರೋಗ್ಯ ಇಲಾಖೆಯ ದೋತ್ರೆ, ಲಕ್ಷ್ಮೀಕಾಂತ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.