ಸಮಾಜದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ವಿಷಾದ
ಯಾದಗಿರಿ: ಸ್ಪರ್ಧಾತ್ಮಕ ಯುಗದಲ್ಲಿ ವೈಜ್ಞಾನಿಕವಾಗಿ ನಾವು ಎಷ್ಟೇ ಪ್ರಗತಿ ಸಾಧಿಸಿದರೂ ಸಮಾಜದಲ್ಲಿ ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತವಿರುವುದು ವಿಷಾದನೀಯ ಎಂದು ನಗರದ ಚಂದ್ರಶೇಖರ ಪದವಿ ಕಾಲೇಜು ಪ್ರಾಂಶುಪಾಲ ರಘುನಾಥರಡ್ಡಿ ಪಾಟೀಲ್ ಹೇಳಿದರು.
ನಗರಸಭೆ ಆವರಣದಲ್ಲಿ ಸ್ವರ್ಣ ಜಯಂತಿ ಶಹರಿ ರೋಜಗಾರ ಯೋಜನೆಯ ಅಡಿಯಲ್ಲಿ 'ಡಾ. ಅಂಬೇಡ್ಕರ್ ದೂರದೃಷ್ಟಿಯಲ್ಲಿ ಅನಿಷ್ಟ ಪದ್ಧತಿಗಳ ನಿರ್ಮೂಲನೆ' ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಅಂಬೇಡ್ಕರರು ದೇಶದಲ್ಲಿ ಸಮಾನತೆ ತರಲು ಅಗಾಧ ಪ್ರಯತ್ನ ಮಾಡಿದ್ದಾರೆ. ಗ್ರಾಮೀಣ ಪ್ರದೇಶದ ಮಹಿಳೆಯರು ಎಲ್ಲರೂ ಸಾಕ್ಷರರಾದಾಗ ಮಾತ್ರ ಬದಲಾವಣೆ ಕಾಣಲು ಸಾಧ್ಯ. ಸರ್ಕಾರದ ಹಲವಾರು ಯೋಜನೆಗಳು ಮಹಿಳೆಯರಿಗೆ ತಲುಪಿಸಲು ಅಧಿಕಾರಿ ವರ್ಗ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಗುಲ್ಬರ್ಗ ಕೇಂದ್ರೀಯ ವಿವಿ ಸಹಾಯಕ ಪ್ರಾಧ್ಯಾಪಕ ಡಾ. ಅಪ್ಪುಗೆರೆ ಸೋಮಶೇಖರ ಉಪನ್ಯಾಸ ನೀಡಿ, ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯ. ಈ ಕಾರ್ಯಕ್ಕೆ ಸಂಘ ಸಂಸ್ಥೆಗಳು ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ ಯಶಸ್ವು ಕಾಣಲು ಸಾಧ್ಯ ಎಂದರು.
ನಗರಸಭೆ ಸಮನ್ವಯಾಧಿಕಾರಿ ಡಾ.ನಾಗರತ್ನ ದೇಶಮಾನ್ಯೆ, ವ್ಯವಸ್ಥಾಪಕ ನೀಲಕಂಠರಾಯ, ಅನೀಲ ಮುತ್ತಗಿ ಇದ್ದರು. ಪಾರ್ವತಿ ಸ್ವಾಗತಿಸಿದರು. ದೇವಿಂದ್ರ ಚಿಂತಗುಂಟ ನಿರೂಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.