ಸರ್ಕಾರಗಳಿಂದ ಮಹಿಳೆಯರಿಗೆ ಅನ್ಯಾಯ: ಸೋಮಶೇಖರ
ಯಾದಗಿರಿ: ಲಕ್ಷಾಂತರ ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂ ನೌಕರರೆಂದು ಪರಿಗಣಿಸದೆ ಹಾಗೂ ಅವರನ್ನು ಪುಡಿಗಾಸಿನಲ್ಲಿ ದುಡಿಸಿಕೊಳ್ಳುತ್ತಿರುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರಿಗೆ ಮಾಡುತ್ತಿರುವ ಘೋರ ಅನ್ಯಾಯವಾಗಿದೆ. ಇದು 1910ರ ಮಾ.8ಕ್ಕಿಂತ ಮುಂಚಿನ ದುಡಿಯುವ ಮಹಿಳೆಯರ ಸ್ಥಿತಿಗತಿಯನ್ನು ಹೋಲುತ್ತದೆ ಎಂದು ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ ಹೇಳಿದರು. ತಾಲೂಕಿನ ಯಲ್ಹೇರಿಯಲ್ಲಿ ಮಹಿಳಾ ದಿನಾಚರಣೆ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಕರಣವೊಂದರಲ್ಲಿ ಕೇವಲ ಪುಡುಗಾಸಿನ ಗೌರವಧನದಲ್ಲಿ ದುಡಿಯುತ್ತಿರುವ ಅಂಗನವಾಡಿ ನೌಕರರನ್ನು ಕಾಯಂ ಮಾಡುವಂತೆ ಆದೇಶ ನೀಡಿದ್ದ ಕರ್ನಾಟಕ ರಾಜ್ಯ ಹೈಕೋರ್ಟ್ನ ತೀರ್ಪನ್ನು ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಶ್ನಿಸಿವೆ ಎಂದರು. ಸಂಘದ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ ಮಾತನಾಡಿದರು. ರಾಮಲಮ್ಮ ಅಧ್ಯಕ್ಷತೆ ವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.