ಬೇಡಿಕೆ ಈಡೇರದಿದ್ದರೆ ಪಿಯು ಮೌಲ್ಯಮಾಪನ ಬಹಿಷ್ಕಾರ: ಪುರ್ಲೆ
ಕನ್ನಡಪ್ರಭ ವಾರ್ತೆ, ಯಾದಗಿರಿ, ಮಾ.19
ಪದವಿ ಪೂರ್ವ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಪಿಯು ಉತ್ತರ ಪತ್ರಿಕೆ ಮೌಲ್ಯ ಮಾಪನವನ್ನು ಬಹಿಷ್ಕರಿಸುವುದಾಗಿ ಪಪೂ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದರು.
ಈ ಕುರಿತು “OÚ«ÚsÚ®Úúڒ¥æàM¦Væ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಪಪೂ ಕಾಲೇಜುಗಳ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಹೋರಾಡುತ್ತಿದ್ದಾರೆ. ಕುಮಾರ ನಾಯಕ ವರದಿ ಅನುಷ್ಠಾನಗೊಳಿಸುವಂತೆ ಆಗ್ರಹಿಸುತ್ತಿದ್ದೇವೆ. ವೇತನ ತಾರತಮ್ಯ ನಿವಾರಣೆ, ಭಡ್ತಿ ಸೌಲಭ್ಯ ನೀಡುವುದು, ಬಿಎಡ್ ಕಡ್ಡಾಯಗೊಳಿಸಿರುವುದನ್ನು ವಾಪಸ್ ಪಡೆಯುವುದು, ಕಾಲ್ಪನಿಕ ವೇತನ ಜಾರಿಗೊಳಿಸುವುದು ಸೇರಿದಂತೆ ನಾಲ್ಕಾರು ಬೇಡಿಕೆಗಳನ್ನು ಇಟ್ಟಿದ್ದೇವೆ. ಸರ್ಕಾರ ಭರವಸೆ ನೀಡುತ್ತಿದೆಯೇ ಹೊರತು ಇದುವರೆಗೂ ಬೇಡಿಕೆ ಈಡೇರಿಸಿಲ್ಲ. ಏ.4ರಿಂದ ಪಿಯು ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಆದ್ದರಿಂದ ನಮ್ಮ ಬೇಡಿಕೆಗಳನ್ನು ಏ.2ರೊಳಗೆ ಸರ್ಕಾರ ಈಡೇರಿಸಬೇಕು. ಇಲ್ಲದಿದ್ದರೆ ಮೌಲ್ಯಮಾಪನಕ್ಕೆ ಹಾಜರಾಗದೇ ನಮ್ಮ ಹೋರಾಟ ಮುಂದುವರಿಸುವುದಾಗಿ ಹೇಳಿದರು.
ಈ ಹಿಂದೆ ಸಿಎಂ ಆಗಿದ್ದ ಯಡಿಯೂರಪ್ಪ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ನಂತರ ಸದಾನಂದಗೌಡರು ಸಿಎಂ ಆಗಿದ್ದಾಗಲೂ ಭರವಸೆ ನೀಡಿ ನಮ್ಮ ಹೋರಾಟವನ್ನು ನಿಲ್ಲಿಸುವಂತೆ ಮಾಡಿದ್ದರು.
ಇಬ್ಬರೂ ಮುಖ್ಯಮಂತ್ರಿಗಳು ನೀಡಿದ ಭರವಸೆ ಭರವಸೆಯಾಗಿಯೇ ಉಳಿದಿದೆ. ಪ್ರತಿ ಬಾರಿಯೂ ಉತ್ತರ ಪತ್ರಿಕೆ ಮೌಲ್ಯಮಾಪನದ ವೇಳೆ ನಾವು ಪ್ರತಿಭಟಿಸುವಂತಾಗಿದೆ. ಈ ಬಾರಿ ಸರ್ಕಾರದ ಯಾವ ಭರವಸೆಯನ್ನೂ ನಾವು ನಂಬುವುದಿಲ್ಲ. ಬೇಡಿಕೆ ಈಡೇರುವವರೆಗೆ ಹೋರಾಡುತ್ತೇವೆ ಎಂದು ಎಚ್ಚರಿಸಿದ ಅವರು, ಇದಕ್ಕೆ ಪಾಲಕರು, ವಿದ್ಯಾರ್ಥಿಗಳು ಸಹಕರಿಸಬೇಕೆಂದು ಮನವಿ ಮಾಡಿದರು