ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಮಹಿಳೆಯರು ಕಾನೂನು ಸದ್ಬಳಕೆ ಮಾಡಿಕೊಳ್ಳಲಿ'

Lingaraj Badiger
Updated On : 23 Mar 2013, 10:52 am

ಶಹಾಪುರ: ಹೆಣ್ಣು ಮಕ್ಕಳಿಗಾಗಿ ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ಶಿಕ್ಷಣದ ಹಕ್ಕನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ನೆರವು ನೀಡಬೇಕು. ಸಂವಿಧಾನದಲ್ಲಿ ಯಾವುದೇ ಲಿಂಗ ತಾರತಮ್ಯಕ್ಕೆ ಅವಕಾಶವಿಲ್ಲ. ಕಾನೂನು ಅರಿವಿನ ಮೂಲಕ ನ್ಯಾಯಬದ್ಧ ಹಕ್ಕುಗಳನ್ನು ಮಹಿಳೆಯರು ಪಡೆದುಕೊಳ್ಳಬೇಕೆಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶ ಸತೀಶ ಎಸ್.ಟಿ. ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಕಾನೂನು ಸಲಹಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವಾ ಸಮಿತಿಯ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಮೇಲೆ ಆಗುವ ಅನ್ಯಾಯ, ದಬ್ಬಾಳಿಕೆಯನ್ನು ಪ್ರತಿಭಟಿಸುತ್ತಾ ಕಾನೂನು ಅಸ್ತ್ರವನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಎಲ್ಲಿಯವರೆಗೆ ಕಾನೂನು ಅರಿವಿನ ಕೊರತೆ ಇರುತ್ತದೆಯೋ ಅಲ್ಲಿಯವರೆಗೆ ನಮ್ಮ ಶೋಷಣೆ ತಪ್ಪಿದ್ದಲ್ಲ ಎಂದು ಅವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲೂಕು ಕಾನೂನು ಸಲಹಾ ಸಮಿತಿ ಸದಸ್ಯೆ ಬಸಮ್ಮ ರಾಂಪುರೆ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಆರ್.ಎಸ್. ನದಾಫ್ ಅಧ್ಯಕ್ಷತೆ ವಹಿಸಿದ್ದರು. ಪದ್ಮಾವತಿ, ರುಕ್ಮಿಣಿ, ಕವಿತಾ, ಶಾಂತಾಬಾಯಿ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement