ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಚಾಕುವಿನಿಂದ ಇರಿದು ಯುವಕ ಕೊಲೆ

Parashurama
Updated On : 24 Mar 2013, 12:25 pm

ಕನ್ನಡಪ್ರಭ ವಾರ್ತೆ  ಗುಲ್ಬರ್ಗ ಮಾ.23
ಚಾಕುವಿನಿಂದ ಇರಿದು ಯುವಕನೊಬ್ಬನಿಗೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ಸಲಾಂ ಟೇಕಡಿ ಹತ್ತಿರ ನಡೆದಿದೆ.
ನಗರದ ಖಮರ್ ಕಾಲೋನಿಯ ನಿವಾಸಿ ಫಿರ್ದೋಷ (20) ಕೊಲೆಯಾದ ಯುವಕ. ಸಲಾಂ ಟೇಕಡಿ ಹತ್ತಿರದ ಹೊಲದಲ್ಲಿ ಶನಿವಾರ ಶವ ಪತ್ತೆಯಾಗಿದ್ದು, ಕೊಲೆಗಾರರು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಕೊಲೆಯಾದ ಯುವಕ ಹೊಡೆದಾಟದ ಪ್ರಕರಣಮೊಂದರಲ್ಲಿ ಆರೋಪಿಯಾಗಿದ್ದನೆಂದು ತಿಳಿದುಬಂದಿದೆ.
ಕೊಲೆಯಾದ ಯುವಕನ ಬಳಿ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದಂಡ ಕಟ್ಟಿದ ರಸೀದಿಯೊಂದು ದೊರೆತಿದ್ದು, ಈ ರಸೀದಿಯ ಆಧಾರದ ಮೇಲೆ ಯುವಕನ ಹೆಸರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸುದ್ದಿ ತಿಳಿದು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸತೀಶ, ಪಿಎಸ್‌ಐ ಆನಂದರಾವ ಹಾಗೂ ಸಿಬ್ಬಂದಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗ್ರಾಮೀಣ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments