ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ತಾಂಡಾಗಳಲ್ಲಿ ಮತದಾರರ ಪಟ್ಟಿ ಪರಿಶೀಲನೆಗೆ ಸೂಚನೆ

Mainashree
Updated On : 24 Mar 2013, 11:15 am

ಕನ್ನಡಪ್ರಭ ವಾರ್ತೆಚಿಂಚೋಳಿಮಾ.23
ತಾಲೂಕಿನ ತಾಂಡಾಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸಮಾಧಾನಕರವಾಗಿಲ್ಲ, ಗ್ರಾಮಲೆಕ್ಕಿಗರಿಗೆ ಮತ್ತು ಕಂದಾಯ ನಿರೀಕ್ಷಕರಿಗೆ ತಾಂಡಾಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ತಿಳಿಸಿದರು.
ಚಂದಾಪುರ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶನಿವಾರ ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದ ಚುನಾವಣಾ ಪೂರ್ವಸಿದ್ದತಾ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾಲೂಕಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವಂತೆ 4 ಸಾವಿರ ಅರ್ಜಿಗಳನ್ನು ಅಗತ್ಯ ದಾಖಲೆಗಳಿಲ್ಲದ ಕಾರಣ ತಿರಸ್ಕರಿಸಲಾಗಿದೆ. ಅರ್ಜಿ ನಮೂನೆ- 6ರಲ್ಲಿ ಅಪೂರ್ಣಗೊಂಡಿರುವ ಅರ್ಜಿಗಳಿಗೆ ದಾಖಲಾತಿಗಳು ಪಡೆದುಕೊಳ್ಳಲು ಗ್ರಾಮಲೆಕ್ಕಿಗರಿಗೆ ಮನೆ ಮನೆಗೆ ಭೇಟಿ ನೀಡಿ ದಾಖಲಾತಿಗಳನ್ನು ಸಂಗ್ರಹಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.
ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿ ಹೆಚ್ಚುವರಿ 16 ಮತದಾನ ಕೇಂದ್ರಗಳನ್ನು ತೆರೆಯಲಾಗುವುದು. ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಿಕೊಳ್ಳಲು ಮಾರ್ಚ್ 31ರಂದು ಕೊನೆಯ ದಿನವಾಗಿರುತ್ತದೆ ಎಂದರು.
ತಾಲೂಕಿನ ಒಟ್ಟು ಮತದಾರರ ಸಂಖ್ಯೆ 1,66,186 ಹೊಂದಿದೆ. ಜಿಲ್ಲೆ ಎಲ್ಲ 7 ತಾಲೂಕಿನಲ್ಲಿ ಚುನಾವಣಾ ಪೂರ್ವ ಸಿದ್ದತೆಯ ಬಗ್ಗೆ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ ಎಂದರು. ಸೇಡಂ ಸಹಾಯಕ ಆಯುಕ್ತೆ ಜೋತ್ನಾಶಾ, ತಹಸೀಲ್ದಾರ್ ಜಗನ್ನಾಥರೆಡ್ಡಿ, ಧರ್ಮರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement