ಕಾಲರಾಕ್ಕೆ ಬಾಲಕಿ ಬಲಿ
ಕ.ಪ್ರ.ವಾರ್ತೆ, ಜೇವರ್ಗಿ, ಮಾ. 26
ಕಳೆದ ಮೂರು ದಿನಗಳಿಂದ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಕಾಲರಾ ಉಲ್ಬಣಗೊಂಡಿದ್ದು ಐದು ವರ್ಷದ ಬಾಲಕಿ ಪ್ರೇಮಾ ಕಲ್ಲಪ್ಪ ಮೃತಪಟ್ಟಿದ್ದಾಳೆ. ರೋಗದಿಂದ ಸುಮಾರು 25 ಜನರು ಅಸ್ವಸ್ಥಗೊಂಡಿದ್ದಾರೆ.
ಕಲುಷಿತ ಕುಡಿಯುವ ನೀರು ಸೇವನೆಯಿಂದ ಕಾಲರಾ ಉಲ್ಬಣಗೊಂಡಿದ್ದು, ರೋಗಿಗಳನ್ನು ನೆಲೋಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪ್ರೊಬೆಷನರಿ ಐಎಎಸ್ ಅಧಿಕಾರಿ ಸತೀಶ್ ಗ್ರಾಮಕ್ಕೆ ಭೇಟಿ ನೀಡಿ ಮುಂಜಾಗೃತಾ ಕ್ರಮವಾಗಿ ಕಲುಷಿತ ನೀರು ಸೇವಿಸದಂತೆ ಗ್ರಾಪಂ ಮೂಲಕ ಡಂಗೂರ ಸಾರಿಸಿ ಅಗತ್ಯ ಕ್ರಮಕೈಗೋಳ್ಳುವಂತೆ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಡಿಎಚ್ಒ ಭೇಟಿ: ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿದ್ದು ತಾಲೂಕು ಆರೋಗ್ಯ ಅಧಿಕಾರಿಗಳು ತಮ್ಮ ಸಿಬ್ಬಂದಿ ಸಮೇತ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಾಲರಾ ನಿಯಂತ್ರಣಕ್ಕಾಗಿ ಮಾತ್ರೆಗಳನ್ನು ವಿತರಿಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.