ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನೆಲೋಗಿಯಲ್ಲಿ ಮುಂದುವರಿದ ಕಾಲರಾ; ಮತ್ತೆ 9 ಮಂದಿ ಅಸ್ವಸ್ಥ

Parashurama
Updated On : 28 Mar 2013, 2:20 am

ಕ.ಪ್ರ.ವಾರ್ತೆ ಜೇವರ್ಗಿ ಮಾ.27
ತಾಲೂಕಿನ ನೆಲೋಗಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಲರಾ ಉಲ್ಬಣಗೊಂಡಿದ್ದು, ಸುಮಾರು 35 ಜನ ಅಸ್ವಸ್ಥಗೊಂಡಿದ್ದಾರೆ. ಮಂಗಳವಾರವೂ ಮತ್ತೆ 9 ಜನ ಅಸ್ವಸ್ಥಗೊಂಡಿದ್ದು ಜೇವರ್ಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಲರಾದಿಂದ ಕಳೆದ ಸೋಮವಾರ 5 ವರ್ಷದ ಬಾಲಕಿ ಪ್ರೇಮಾ ಕಲ್ಲಪ್ಪ ಹಿಪ್ಪರಗಿ ಕರಳು ಬೇನೆಯಿಂದ ಸಾವನ್ನಪ್ಪಿದ್ದ ಬಗ್ಗೆ ವರದಿಯಾಗಿದ್ದು, ಇದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ಕಲುಷಿತ ಕುಡಿಯುವ ನೀರು ಸೇವನೆಯಿಂದ ಕಾಲರಾ ಉಲ್ಬಣಗೊಂಡಿದೆ. ಕಾಲರಾದಿಂದ ನರಳುತ್ತಿರುವ ರೋಗಿಗಳನ್ನು ನೆಲೋಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜೇವರ್ಗಿ ಸರ್ಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರಳು ಬೇನೆ ನಿಯಂತ್ರಣಕ್ಕಾಗಿ ನೆಲೋಗಿಯಲ್ಲಿ ಮೂವರು ವೈದ್ಯಾಧಿಕಾರಿಗಳು ಬೀಡುಬಿಟ್ಟಿದ್ದು ಗ್ರಾಮಸ್ಥರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸಿದ್ದು ಪಾಟೀಲ್ ತಿಳಿಸಿದ್ದಾರೆ.
ಟ್ಯಾಂಕರ್ ನೀರು ಪೂರೈಕೆ: ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ಕಾಲರಾ ಉಲ್ಬಣಗೊಂಡಿದರಿಂದ ಗ್ರಾಮದ ಹೊರವಲಯದಲ್ಲಿರುವ ತೆರೆದ ಬಾವಿಯಿಂದ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಶುದ್ಧವಾದ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments