ರೇಲ್ವೆ ಬಜೆಟ್ ವಿರೋಧಿಸಿ ಕೆಜೆಪಿ ಕಾರ್ಯಕರ್ತರ ಪ್ರತಿಭಟನೆ
ಗುಲ್ಬರ್ಗ: ಮಾಜಿ ಬೆಳಗಾವಿ: ಕೇಂದ್ರ ಸರ್ಕಾರ ರೇಲ್ವೆ ಬಜೆಟ್ನಲ್ಲಿ ಕರ್ನಾಟಕಕ್ಕೆ ತೀವ್ರ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕರ್ನಾಟಕ ಜನತಾ ಪಾರ್ಟಿ ಕಾರ್ಯಕರ್ತರು ಬುಧವಾರ ಬೆಳಗಾವಿಯ ರೇಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ರೈಲು ತಡೆಯಲು ರೇಲ್ವೆ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಹಾಗಾಗಿ, ಪ್ರತಿಭಟನಾಕಾರರು ನಿಲ್ದಾಣದಲ್ಲೇ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ರೇಲ್ವೆ ಸಚಿವರು ಲೋಕಸಭೆಯಲ್ಲಿ ಮಂಡಿಸಿದ ರೇಲ್ವೆ ಬಜೆಟ್ನಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡಲಾಗಿದೆ. ಮಲತಾಯಿ ಧೋರಣೆ ಮುಂದುವರೆಸಲಾಗಿದೆ ಎಂದು ಆರೋಪಿಸಿದರು.
ಕೆಜೆಪಿ ರಾಜ್ಯ ಯುವ ಘಟಕದ ಕಾರ್ಯದರ್ಶಿ ರಾಜೀವ ಟೋಪಣ್ಣವರ, ಅಣ್ಣಾಸಾಹೇಬ ದೇಸಾಯಿ, ವಿಜಿತ ಹಿರೇಮಠ, ಬಸವರಾಜ ಉದೋಶಿ, ಪ್ರಸಾದ ದೇವರಮನಿ, ಅಭಿಷೇಕ ಉದೋಶಿ, ಶಿವಾನಂದ ಖಾರಿ, ರಾಜು ಹಿರೇಮಠ, ಸಮೀರ ಪಾಶಾ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.