ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಚೋಳನ್ ಅಧಿಕಾರ ಸ್ವೀಕಾರ

Rashmi Kasaragodu
Updated On : 29 Mar 2013, 11:54 am

ಯಾದಗಿರಿ: ನೂತನ ಜಿಲ್ಲಾಧಿಕಾರಿಯಾಗಿ ಪಿ. ರಾಜೇಂದ್ರ ಚೋಳನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಳಕ್ಕೆ ನಿಯೋಜಿತರಾದ ಚೋಳನ್ ಅವರು ಆಗಮಿಸಿ ಗುರುವಾರ ಅಧಿಕಾರಿ ಸ್ವೀಕರಿಸಿದರು.  ಜಿಲ್ಲೆಯಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಎಲ್ಲ ಸಹಕಾರ ಅಗತ್ಯವಿದೆ. ಅಲ್ಲದೇ ಹೊಸ ಜಿಲ್ಲೆಯ ಅಭಿವೃದ್ಧಿಗೂ ಶ್ರಮಿಸುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದರು. ಎಫ್.ಆರ್. ಜಮಾದಾರ ಅವರು ಕಳೆದ 6 ತಿಂಗಳ ಹಿಂದಷ್ಟೇ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದರು. ಇದರಿಂದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆ ನಾಲ್ವರು ಜಿಲ್ಲಾಧಿಕಾರಿಗಳನ್ನು ಕಾಣುವಂತಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement