ವೀರನಗೌಡ ನೇಮಕ
ಲಿಂಗಸ್ಗೂರು: ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಂಟಿ ಕಾರ್ಯದರ್ಶಿಯನ್ನಾಗಿ ವೀರನಗೌಡ ಪಾಟೀಲ್ ಐದನಾಳ ಅವರನ್ನು ಜಿಲ್ಲಾಧ್ಯಕ್ಷ ಎ.ವಸಂತ ಕುಮಾರ ಅವರು ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ.
ಜೂನ್ 2ನೇ ವಾರದಲ್ಲಿ ಸಮ್ಮೇಳನ
ರಾಯಚೂರು: ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್ ತಿಂಗಳ ಎರಡನೇ ವಾರದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಾಲೂಕು ಕಸಾಪ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ವೆಂಕಟೇಶ ನವಲಿ, ಈಚೆಗೆ ಕರೆದಿದ್ದ ಕಸಾಪ ತಾಲೂಕು ಅಧ್ಯಕ್ಷ ಚಿದಾನಂದ ಸಾಲಿ ಅಧ್ಯಕ್ಷತೆಯ ಸಭೆಯಲ್ಲಿ ಜೂನ್ ಎರಡನೇ ವಾರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 7ರಂದು ನಗರದಲ್ಲಿ ವಿವಿಧ ಸಾಂಸ್ಕೃತಿಕ ಸಂಘಟನೆಗಳು, ಸಾಹಿತ್ಯಾಸಕ್ತರು, ಹಿರಿಯರ ಸಮಾಲೋಚನಾ ಸಭೆಯನ್ನು ಕರೆಯಲು ಸಭೆಯಲ್ಲಿ ತೀರ್ಮಾನಿಸಿದ್ದು, ಸಭೆಯಲ್ಲಿ ಕೋಶಾಧ್ಯಕ್ಷ ವಿಜಯರಾಜೇಂದ್ರ, ಕಾರ್ಯಕಾರಿ ಸಮಿತಿ ಸದಸ್ಯ ಲಕ್ಷ್ಮಿರೆಡ್ಡಿ, ಮಲ್ಲಿಕಾರ್ಜುನ ಹಳ್ಳೂರು ಸೇರಿದಂತೆ ಅನೇಕರಿದ್ದರು ಎಂದು ತಿಳಿಸಿದ್ದಾರೆ.
ಜೆಎಸ್‌ಎಸ್: ಅರ್ಜಿ ಆಹ್ವಾನ
ರಾಯಚೂರು: ಸುತ್ತೂರು ಶ್ರೀಕ್ಷೇತ್ರದ ಜೆಎಸ್‌ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1 ರಿಂದ 7ನೇ ತರಗತಿವರೆಗೆ ಕನ್ನಡ ಮಾಧ್ಯಮ, 1 ರಿಂದ 5ನೇ ತರಗತಿಯ ಆಂಗ್ಲ ಮಾಧ್ಯಮ ಮತ್ತು 8ನೇ ತರಗತಿಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಕ್ಕೆ ಪ್ರವೇಶಾವಕಾಶವಿದೆ. ಗ್ರಾಮಾಂತರ ಪ್ರದೇಶದ ಬಡತನ ರೇಖೆಯೊಳಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ 10 ಕಡೆಯ ದಿನ. ಅರ್ಜಿಗಳನ್ನು ಶಾಲಾ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ ವೆಬ್‌ಸೈಟ್- ಢಿಢಿಢಿ.ಞಡಡ್ಟಟಿಟ್ಝಟಿಜ.್ಟ್ಠ್ಜ ಅಥವಾ ಢಿಢಿಢಿ.ಞಡಡ್ಞಢ್ಞ.್ಟ್ಠ್ಜ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದಕ್ಕಾಗಿ ಹಣ ನೀಡುವ ಅಗತ್ಯವಿಲ್ಲ. ಅಂಚೆ ಮೂಲಕ ಅರ್ಜಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವವಿಳಾಸವುಳ್ಳ 5ರ ಪೋಸ್ಟಲ್ ಸ್ಟ್ಯಾಂಪ್ ಅಂಟಿಸಿದ ಲಕೋಟೆಯನ್ನು ಆಡಳಿತಾಧಿಕಾರಿಗಳು, ಜೆಎಸ್‌ಎಸ್ ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು. ವಿವರಕ್ಕೆ ದೂ. 082210232323, ಸಂಪರ್ಕಿಸಬಹುದು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.