ಅಪಘಾತ: ವ್ಯಕ್ತಿ ಸ್ಥಿತಿ ಚಿಂತಾಜನಕ
ಗುಲ್ಬರ್ಗ: ಟಂಟಂಮೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ತೀವ್ರವಾಗಿ ಗಾಯಗೊಂಡ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಬಿದ್ದಾಪುರ ಕಾಲೋನಿಯ ಚನ್ನಮಲ್ಲಪ್ಪ ಎಂಬಾತ ಗಾಯಗೊಂಡಿದ್ದಾನೆ.
ಈತ ಕೇಂದ್ರ ಬಸ್ ನಿಲ್ದಾಣದ ಎದುರಿನ ರಸ್ತೆ ದಾಟುತ್ತಿದ್ದಾಗ ಟಂಟಂ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಆತನಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಚಿಂತಾಜನಕ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚುವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.