'ಆತ್ಮಾವಲೋಕನ ಮಾಡಿಕೊಳ್ಳುವೆ'
ಚಿಂಚೋಳಿ: ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಮತ ಬಾಂಧವರು ನೀಡಿದ ತೀರ್ಪಿಗೆ ತಲೆಬಾಗುವುದಾಗಿ ಪರಾಭವಗೊಂಡ ಬಿಜೆಪಿ ಅಭ್ಯರ್ಥಿ ರಮೇಶ ಯಾಕಾಪುರ ತಿಳಿಸಿದ್ದಾರೆ.
ಚಿಂಚೋಳಿ ಮೀಸಲು ವಿಧಾನಸಭೆ ಮತಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ ಕಳೆದ 30 ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ನಾನು ಜನಸಾಮಾನ್ಯರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಮತ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುವೆನೆಂದು ತಿಳಿಸಿದರು.