ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಸೋಲಿನಿಂದ ಧೃತಿಗೆಡುವುದಿಲ್ಲ'

Vishwanath S
Updated On : 10 May 2013, 12:26 pm

ಸೇಡಂ: ರಾಜಕೀಯದಲ್ಲಿ ಸೋಲು ಗೆಲವು ಸಾಮಾನ್ಯ ಆದರು ಇದಕ್ಕೆ ದೃತಿಗೆಡದೆ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೂಳ್ಳುವೇ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜಕುಮಾರ ಪಾಟೀಲ್ ತೆಲ್ಕೂರ ತಿಳಿಸಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನೂತನವಾಗಿ ಆಯ್ಕೆಯಾಗಿರುವ ಶಾಸಕರನ್ನು ಅಭಿನಂದಿಸುತ್ತೇನೆ. ಮುಂಬರುವ ದಿನಗಳಲ್ಲಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಿ ಇದಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ ಅದೆಲ್ಲವನ್ನು ಬಿಟ್ಟು ದ್ವೇಷದ ರಾಜಕಾರಣ ಮಾಡುವುದನ್ನು ನಿಲ್ಲಿಸಲಿ ಎಂದು ಸಲಹೆ ನೀಡಿದರು.
ಸೋಲು ಮತ್ತು ಗೆಲವು ಸಮಾನವಾಗಿ ಸ್ವೀಕರಿಸುವ ವ್ಯಕ್ತಿತ್ವ ನನ್ನದಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ವಿರೋಧ ಪಕ್ಷದ ನಾಯಕನಾಗಿ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯಲು ನಿರ್ಧರಿಸಿದ್ದೇನೆ, ತಾಲೂಕಿನ ಯಾವುದೇ ಅಭಿವೃದ್ಧಿ ಪರ ಕೆಲಸಗಳಿಗೆ ನನ್ನ ಬೆಂಬಲ ಸದಾ ಇರುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement