ಕೃಷ್ಣಾ ಕಾಡಾ ಅಧ್ಯಕ್ಷ ಸ್ಥಾನಕ್ಕೆ ಕುಂಬಾರ ರಾಜಿನಾಮೆ
ಬಿಜಾಪುರ: ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಕೆ. ಬೆಳ್ಳುಬ್ಬಿ ಅವರ ಸೋಲಿನ ನೈತಿಕ ಹೊಣೆ ಹೊತ್ತು OÚäÎÛ| OÛsÛ ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದು ಬಸವರಾಜ ಕುಂಬಾರ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣಾ ಕಾಡಾ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಅಲ್ಪ ಸಮಯದಲ್ಲಿ ಕೃಷ್ಣಾ ಜಲಾನಯನ ಪ್ರದೇಶದ ನೀರಾವರಿ ಸಮಸ್ಯೆಗಳನ್ನು ಅಧ್ಯಯನ ಮಾಡಿ ರೈತರ ಸಮಸ್ಯೆಗಳಿಗೆ ಪರಿಹಾರ, ನೀರು ಬಳಕೆ, ಬೆಳೆ ಪದ್ಧತಿ ಬಗ್ಗೆ ರೈತರಲ್ಲಿ ತಿಳಿವಳಿಕೆ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರ ಬಗ್ಗೆ ತೃಪ್ತಿಯಿದೆ. ಈ ಮುಂದೆ ಕೃಷ್ಣಾ ಕಾಡಾದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವವರು ಹಿಂದೆ ಹಾಕಿಕೊಂಡ ಯೋಜನೆಗಳನ್ನು ಮುಂದುವರಿಸಿಕೊಂಡು ರೈತರಲ್ಲಿ ಮಿತವ್ಯಯವಾಗಿ ನೀರು ಬಳಸುವ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ವಾರಾಬಂದಿ ಕಟ್ಟುನಿಟ್ಟಾಗಿ ಜಾರಿಗೆ ತಂದು ಭೂಮಿ ಸವುಳು- ಜವುಳು ಆಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.