ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನಾಳೆ ಗ್ರಾಪಂ ಕಚೇರಿ ಮುಂದೆ ಧರಣಿ

Lingaraj Badiger
Updated On : 16 May 2013, 11:17 am

ಕ.ಪ್ರ. ವಾರ್ತೆ, ಗುಲ್ಬರ್ಗ, ಮೇ 15
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನೂರಾರು ಕೃಷಿ ಕೂಲಿಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಒತ್ತಾಯಿಸಿ ಜೇವರ್ಗಿ ತಾಲೂಕಿನ ಕೋಳಕೂರ ಗ್ರಾಮದ ನೂರಾರು ಜನರು ಮೇ 17ರಂದು ಕೋಳಕೂರ ಗ್ರಾಪಂ ಕಚೇರಿ ಮುಂದೆ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಕೋಳಕೂರ ಗ್ರಾಮದ ನೂರಾರು ಕೃಷಿ ಕೂಲಿ ಕಾರ್ಮಿಕರು ಹೊಸ ಜಾಬ್‌ಕಾರ್ಡ್‌ಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಭರ್ತಿ ಮಾಡಿದ್ದು, ಅವರಿಗೆ ತಕ್ಷಣ ಹೊಸ ಜಾಬ್‌ಕಾರ್ಡ್ ವಿತರಿಸಬೇಕು ಮತ್ತು ಬ್ಯಾಂಕ್ ಖಾತೆ ತೆಗೆಸಲು ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ಪ್ರಾಂತ ರೈತಸಂಘ ಜಿಲ್ಲಾ ಸಮಿತಿ ಅಧ್ಯಕ್ಷ ಸುಭಾಷ ಹೊಸಮನಿ ಒತ್ತಾಯಿಸಿದ್ದಾರೆ.
ಅಂಗವಿಕಲರಿಗೆ ಮೀಸಲಿರುವ ಸರ್ಕಾರದ ಅನುದಾನದ ಹಣದಲ್ಲಿ ಶೇ. 3ರ ನಿಧಿ ಹಣ ಜಮಾ ಮಾಡಿ ಅಂಗವಿಕಲರಿಗೆ ಮೂಲ ಸೌಲಭ್ಯ ವಿತರಿಸಬೇಕು, ಹರನೂರ ಗ್ರಾಮದ ನೂರಾರು ಕೃಷಿ ಕೂಲಿ ಕಾರ್ಮಿಕರು 2103ರ ಫೆಬ್ರುವರಿ ತಿಂಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ 150 ಕುಟುಂಬಗಳ ಸದಸ್ಯರು 50 ದಿನ ಬದು ನಿರ್ಮಾಣದ ಕೆಲಸ ಮಾಡಿದ್ದಾರೆ. ಅವರಿಗೆ ಇಲ್ಲಿಯವರೆಗೆ ಸಂಬಳ ನೀಡಿಲ್ಲ. ಕೂಡಲೇ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕೋಳಕೂರ ಗ್ರಾಮ ಪಂಚಾಯತಿನಲ್ಲಿ ಕೋಳಕೂರ ಗ್ರಾಮದ ನೂರಾರು ಕುಟುಂಬಗಳ ಸದಸ್ಯರಿಗೆ ಈ ಯೋಜನೆಯಲ್ಲಿ 150 ದಿನಗಳ ಬದು ನಿರ್ಮಾಣದ ಕೆಲಸ ಕೊಡಬೇಕು, ವಾರಕ್ಕೊಮ್ಮೆ ಸಂಬಳ ನೀಡಬೇಕು, ಕೆಲಸಕ್ಕೆ ಹೋದ ಸ್ಥಳದಲ್ಲಿ ಕುಡಿಯುವ ನೀರಿನ ಅನುಕೂಲ ಮಾಡಿಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಮೇ 17ರಂದು ಧರಣಿ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement