ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕೋಲಿ ಸಮಾಜದಿಂದ ವಿಜಯೋತ್ಸವ

Vishwanath S
Updated On : 19 May 2013, 12:00 pm

ಯಾದಗಿರಿ: ಗುರುಮಠಕಲ್ ಕ್ಷೇತ್ರದ ಶಾಸಕ ಬಾಬುರಾವ ಚಿಂಚನಸೂರ ಅವರಿಗೆ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿರುವುದಕ್ಕೆ ಜಿಲ್ಲಾ ಟೋಕರಿ ಕೋಲಿ ಸಮಾಜದ ಅಧ್ಯಕ್ಷ ಉಮೇಶ ಮುದ್ನಾಳ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಬಾಕ್ ರ್ಯಾಲಿ ಹಮ್ಮಿಕೊಂಡು, ಸಿಹಿ ಹಂಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು. ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮಾಡಿ ಸುಭಾಷಚಂದ್ರ ಬೋಸ್, ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿವಿಧೆಡೆಯಿಂದ ಕೋಲಿ ಸಮಾಜದವರು ಹಾಗೂ ಚಿಂಚನಸೂರ ಅವರ ಅಭಿಮಾನಿಗಳು ಆಗಮಿಸಿ ಸಂಭ್ರಮಿಸಿದರು. ಉಮೇಶ ಮುದ್ನಾಳ ಮಾತನಾಡಿ, ಚಿಂಚನಸೂರ ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸುತ್ತೇವೆ. ಇದು ರಾಜ್ಯದ ಕಬ್ಬಲಿಗ ಸಮಾಜಕ್ಕೆ ನೀಡಿದ ಗೌರವವಾಗಿದೆ. ಚಿಂಚನಸೂರ ಅವರು ಹಿರಿಯ ಹಾಗೂ ಅನುಭವಿ ರಾಜಕಾರಣಿಯಾಗಿದ್ದು, ಅವರಿಗೆ ಪ್ರಮುಖ ಖಾತೆಯನ್ನು ನೀಡುವುದರ ಮೂಲಕ ಅವರ ಸೇವೆಯನ್ನು ರಾಜ್ಯದ ಅಭಿವೃದ್ಧಿಗೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement