ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕಾಲೇಜು ಆರಂಭಕ್ಕೆ ಯತ್ನ

Rashmi Kasaragodu
Updated On : 22 May 2013, 11:07 am

ಸೇಡಂ: ತಾಲೂಕಿನಲ್ಲಿ ಹೆಚ್ಚಿನ ಉದ್ದಿಮೆಗಳು ಪ್ರಾರಂಭವಾಗುತ್ತಿರುವುದರಿಂದ ಇಲ್ಲಿನ ಸ್ಥಳೀಯ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರಿ ಐಟಿಐ ಮತ್ತು ಪಾಲಿಟೆಕ್ನಿಕ್‌ನ ಅವಶ್ಯಕತೆ ಇರುವ ಬಗ್ಗೆ ಪರಿಶೀಲಿಸಿ ಪ್ರಯತ್ನಿಸಲಾಗುವುದು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಪಟ್ಟಣದಲ್ಲಿ ನಡೆದ ಅಭಿನಂದನಾ ಸಮಾರಂಭದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನರ್ಸಿಂಗ್ ಕಾಲೇಜು ಪ್ರಾರಂಭಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳ ಸ್ಥಿತಿ-ಗತಿ ಪರಿಶೀಲಿಸಿ ತಾಲೂಕಿನಲ್ಲಿ ಹೊಸ ಕಾಲೇಜು ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
371(ಜೆ) ಕಲಂ ಜಾರಿಗೆ ಸರ್ಕಾರ ಶೀಘ್ರ ನಿಯಮಾವಳಿ ರೂಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯಪ್ರವೃತ್ತನಾಗುವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಾಗ್ದರಿ- ರಿಬ್ಬನಪಲ್ಲಿ ಮಧ್ಯದಲ್ಲಿರುವ ಟೋಲ್ ಗೇಟ್‌ಗಳಲ್ಲಿ ದರ ಹೆಚ್ಚಿಸಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ಈಗಾಗಲೇ ಸಾರ್ವಜನಿಕರಿಂದ ಅಹವಾಲು ಬಂದಿದ್ದು, ಯಾವ ಮಾನದಂಡದ ಮೇಲೆ ಹೆಚ್ಚಿಸಲಾಗಿದೆ ಎಂಬುದನ್ನು ತಿಳಿದುಕೊಂಡು ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement