ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನಮೋಶಿ ಪಕ್ಷಾಂತರ ವದಂತಿಗೆ ತೆರೆ

Rashmi Kasaragodu
Updated On : 22 May 2013, 11:06 am

ಗುಲ್ಬರ್ಗ: ಜೆಡಿಎಸ್‌ನಿಂದ ಗುಲ್ಬರ್ಗ ದಕ್ಷಿಣ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿರುವ ಶಶೀಲ್ ನಮೋಶಿ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ತಮ್ಮ ಬಳಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನಮೋಶಿ ಪಕ್ಷಾಂತರದ ಕುರಿತಂತೆ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಗುಲ್ಬರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನಿಗೆ ಉತ್ತರಿಸಿದ ಅವರು, ನಮೋಶಿ ಮತ್ತೆ ಬಿಜೆಪಿಗೆ ಬರುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಅವರನ್ನು ಮತ್ತೆ ಪಕ್ಷಕ್ಕೆ ಬರಮಾಡಿಕೊಳ್ಳುವ ಬಗ್ಗೆ ಅಂತಿಮ ನಿರ್ಣಯ ಗುಲ್ಬರ್ಗ ಜಿಲ್ಲೆಯ ಮುಖಂಡರಿಗೆ ಬಿಟ್ಟಿದೆ ಎಂದು ಸ್ಪಷ್ಟಪಡಿಸಿದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement