ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸ್ವಚ್ಛ ಆಡಳಿತಕ್ಕೆ ಸಿಎಂ ಆದ್ಯತೆ : ಎಂವೈಪಿ

Rashmi Kasaragodu
Updated On : 22 May 2013, 11:06 am

ಗುಲ್ಬರ್ಗ: ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಸ್ವಚ್ಛತೆ ಆಡಳಿತ ನೀಡುವ ದೃಷ್ಟಿಯಿಂದ ಕಳಂಕಿತರನ್ನು ದೂರ ಇಟ್ಟಿರುವುದು ರಾಜಕೀಯ ದೃಷ್ಟಿಯಿಂದ ಸ್ವಾಗತಾರ್ಹ ಬೆಳವಣಿಗೆ ಎಂದು ಮಾಜಿ ಶಾಸಕ ಎಂ.ವೈ. ಪಾಟೀಲ್ ಹೇಳಿದರು.
ಅಫಜಲ್ಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕ ಮಾಲೀಕಯ್ಯ ಗುತ್ತೇದಾರ ನಕಲಿ ಸಾರಾಯಿ ದಂಧೆಯಲ್ಲಿ ಭಾಗಿಯಾಗಿರುವುದು, ಅಕ್ರಮ ಮರಳು ಸಾಗಾಣಿಕೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅವರನ್ನು ಕೂಡ ಸಚಿವ ಸ್ಥಾನದಿಂದ ದೂರ ಇಡಲಾಗಿದೆ ಎಂದರು.
ಅಫಜಲ್ಪುರ ತಾಲೂಕಿನಲ್ಲಿ ನಕಲಿ ಸಾರಾಯಿ ಹಾಗೂ ಅಕ್ರಮ ಮರಳು ಸಾಗಾಣಿಕೆಯಲ್ಲಿ ಶಾಸಕರೊಂದಿಗೆ ತಾಲೂಕಿನ ಅಧಿಕಾರಿಗಳು ಸಹ ಶಾಮೀಲಾಗಿದ್ದು, ತಾಲೂಕನ್ನು ಗೂಂಡಾಗಳ ಕೇಂದ್ರವನ್ನಾಗಿ ಪರಿವರ್ತಿಸುತ್ತಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಲವೇ ದಿನಗಳಲ್ಲಿ ಬಹಿರಂಗ ಪಡಿಸಲಾಗುವುದು ಎಂದರು. ಶಾಸಕರು ಗೆಲವು ಪಡೆದಿರುವುದು ಅವರು ಮಾಡಿದ ಅಭಿವೃದ್ಧಿ ಕಾರ್ಯಗಳಿಂದಲ್ಲ. ಅಕ್ರಮ ಮದ್ಯ ಹಾಗೂ ನೋಟುಗಳನ್ನು ಹಂಚಿ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದಾರೆ. ಅವರ ಆಡಳಿತದ 25 ವರ್ಷಗಳಲ್ಲಿ ಪ್ರಜಾಪ್ರಭುತ್ವವು ಕ್ಷೇತ್ರದಲ್ಲಿ ಸತ್ತು ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಜೆಪಿ ನಕಲಿ ಸಾರಾಯಿ, ಅಕ್ರಮ ಮರಳುಗಾರಿಕೆಯ ವಿರುದ್ಧ ಸಂಘಟಿತ ಹೋರಾಟವನ್ನು ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸದಸ್ಯರಾದ ಪ್ರಕಾಶ ಜಮಾದಾರ, ಮತೀನ ಪಟೇಲ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement